Goa Liberation Day:ಮೋದಿಯಿಂದ 650 ಕೋಟಿ ರೂ ಮೌಲ್ಯದ ಯೋಜನೆ ಉದ್ಘಾಟನೆ, ಶಂಕುಸ್ಥಾಪನೆ

Published : Dec 18, 2021, 01:23 PM IST

ಡಿಸೆಂಬರ್ 19, 1961, ಗೋವಾದ ಸ್ವಾತಂತ್ರ್ಯ ದಿನಾಚರಣೆ. ಈ ದಿನ ಪೋರ್ಚುಗೀಸರ ಆಳ್ವಿಕೆಯಿಂದ ಗೋವಾ ವಿಮೋಚನೆಯಾಯಿತು. ಗೋವಾದ ಸ್ವಾತಂತ್ರ್ಯಕ್ಕಾಗಿ ಭಾರತೀಯ ಸೇನೆಯು ಡಿಸೆಂಬರ್ 2 ರಂದು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತು. ಇದರ ನಂತರ, ಪೋರ್ಚುಗೀಸ್ ಗವರ್ನರ್ ಮನು ವಾಸ್ಲೋ ಡಾ ಸಿಲ್ವಾ ಶರಣಾದರು. ಹೀಗೆ 451 ವರ್ಷಗಳ ವಸಾಹತುಶಾಹಿ ಆಳ್ವಿಕೆ ಕೊನೆಗೊಂಡಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ವೈಭವದ ದಿನದಂದು ಅಂದರೆ ಡಿಸೆಂಬರ್ 19 ರಂದು ಗೋವಾಕ್ಕೆ ಭೇಟಿ ನೀಡಲಿದ್ದು, ಗೋವಾ ವಿಮೋಚನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿಯವರು ಸ್ವಾತಂತ್ರ್ಯ ಹೋರಾಟಗಾರರು ಮತ್ತು 'ಆಪರೇಷನ್ ವಿಜಯ್' ನ ಹಿರಿಯ ಯೋಧರನ್ನು ಸನ್ಮಾನಿಸಲಿದ್ದಾರೆ. ಗೋವಾದಲ್ಲಿ 650 ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ದಾರೆ. ಇವುಗಳಲ್ಲಿ ಆಧುನಿಕ ಆಸ್ಪತ್ರೆ ಮತ್ತು ಅಗುಡಾ ಫೋರ್ಟ್ ಪ್ರಿಸನ್ ಮ್ಯೂಸಿಯಂ ಉದ್ಘಾಟನೆಗೊಳ್ಳಲಿದೆ.

PREV
15
Goa Liberation Day:ಮೋದಿಯಿಂದ 650 ಕೋಟಿ ರೂ ಮೌಲ್ಯದ ಯೋಜನೆ ಉದ್ಘಾಟನೆ, ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 19 ರಂದು ಮಧ್ಯಾಹ್ನ 3 ಗಂಟೆಗೆ ಗೋವಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ‘ಆಪರೇಷನ್ ವಿಜಯ್’ ಯೋಧರನ್ನು ಪ್ರಧಾನಿ ಸನ್ಮಾನಿಸಲಿದ್ದಾರೆ. ಗೋವಾವನ್ನು ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಳಿಸಿದ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ 'ಆಪರೇಷನ್ ವಿಜಯ್' ನ ಯಶಸ್ಸನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನಾಚರಣೆಯನ್ನು ಆಯೋಜಿಸಲಾಗುತ್ತದೆ. ಸುಮಾರು 220 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆಯನ್ನು ಮೋದಿ ಸಾರ್ವಜನಿಕರಿಗೆ ಹಸ್ತಾಂತರಿಸಲಿದ್ದಾರೆ.

25

ನ್ಯೂ ಸೌತ್ ಗೋವಾ ಜಿಲ್ಲಾ ಆಸ್ಪತ್ರೆಯು ಆಧುನಿಕ ವೈದ್ಯಕೀಯ ಮೂಲಸೌಕರ್ಯವನ್ನು ಹೊಂದಿದೆ, ಇದರಲ್ಲಿ 33 ವಿಶೇಷತೆಗಳಲ್ಲಿ OPD ಸೇವೆಗಳು, ಇತ್ತೀಚಿನ ಕ್ಲಿನಿಕಲ್ ಮತ್ತು ಪ್ರಯೋಗಾಲಯ ಸೌಲಭ್ಯಗಳು ಮತ್ತು ಫಿಸಿಯೋಥೆರಪಿ, ಆಡಿಯೊಮೆಟ್ರಿ ಮುಂತಾದ ಸೇವೆಗಳು ಸೇರಿವೆ. ಆಸ್ಪತ್ರೆಯು 500 ಆಮ್ಲಜನಕ ಹಾಸಿಗೆಗಳು, 5500 ಲೀಟರ್ LMO ಟ್ಯಾಂಕ್‌ಗಳು ಮತ್ತು 600 LPM ನ 2 PSA ಆಮ್ಲಜನಕ ಘಟಕಗಳನ್ನು ಹೊಂದಿದೆ.

35

ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ, ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಬ್ಲಾಕ್ ಅನ್ನು 380 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಇಡೀ ಗೋವಾ ರಾಜ್ಯದ ಏಕೈಕ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿದ್ದು, ಉತ್ತಮ ಗುಣಮಟ್ಟದ ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸುತ್ತದೆ. 

45

ಇದು ಆಂಜಿಯೋಪ್ಲ್ಯಾಸ್ಟಿ, ಬೈಪಾಸ್ ಶಸ್ತ್ರಚಿಕಿತ್ಸೆ, ಯಕೃತ್ತು ಕಸಿ, ಮೂತ್ರಪಿಂಡ ಕಸಿ, ಡಯಾಲಿಸಿಸ್ ಮುಂತಾದ ವಿಶೇಷ ಸೇವೆಗಳನ್ನು ಒದಗಿಸುತ್ತದೆ. ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನಲ್ಲಿ PM-CARES ಅಡಿಯಲ್ಲಿ 1000 LPM PSA ಆಕ್ಸಿಜನ್ ಪ್ಲಾಂಟ್ ಸ್ಥಾಪಿಸಲಾಗಿದೆ.

55

ಸ್ವದೇಶ್ ದರ್ಶನ್ ಯೋಜನೆಯಡಿ ಗೋವಾದ ಸ್ವಾತಂತ್ರ್ಯದ ಸಂಕೇತವಾಗಿರುವ ಅಗುಡಾ ಫೋರ್ಟ್ ಪ್ರಿಸನ್ ಮ್ಯೂಸಿಯಂ ಅನ್ನು 28 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಪಾರಂಪರಿಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗಿದೆ.

Read more Photos on
click me!

Recommended Stories