ಬೆಂಗಳೂರು: ದಸರಾ ಮುಗಿದು ಇನ್ನೇನು ದೀಪಾವಳಿ ಹಬ್ಬ ಹತ್ತಿರವಾಗುತ್ತಿದೆ. ಹೀಗಿರುವಾಗಲೇ ಆಭರಣ ಖರೀದಿಸುವವರ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗಿದ್ದು, ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇಂದಿನ ಗೋಲ್ಡ್ ರೇಟ್ ನೋಡೋಣ ಬನ್ನಿ.
ಮದುವೆ ಸೀಸನ್‌ನಲ್ಲಿ ಗಗನಮುಖಿಯಾಗಿದ್ದ ಚಿನ್ನದ ಬೆಲೆಯು ಕಳೆದ ಎರಡು ತಿಂಗಳಿನಿಂದಲೂ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿದೆ. ಇದೀಗ ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತವಾಗುತ್ತಿರುವುದು ಆಭರಣ ಖರೀದಿಸುವವರ ಮುಖದಲ್ಲಿ ಕೊನೆಗೂ ಮಂದಹಾಸ ಮೂಡುವಂತೆ ಮಾಡಿದೆ.
26
24 ಕ್ಯಾರಟ್ 10 ಗ್ರಾಮ್ ಮೇಲೆ 1990 ರುಪಾಯಿ ಕುಸಿತ
ಹೌದು, ನಿನ್ನೆ 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ 1700 ರುಪಾಯಿ ಇಳಿಕೆಯಾಗಿತ್ತು. ಇದೀಗ ಅಕ್ಟೋಬರ್ 23ರಂದು 10 ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಮತ್ತೆ 1900 ರುಪಾಯಿ ಇಳಿಕೆಯಾಗಿದೆ. ಈ ಮೂಲಕ ಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,248 ರುಪಾಯಿಗಳಾಗಿದೆ.
36
ಒಂದು ತಿಂಗಳಲ್ಲಿ ಹತ್ತು ಗ್ರಾಮ್ ಮೇಲೆ ₹10,000 ಕುಸಿತ
ಕಳೆದ ಒಂದು ತಿಂಗಳಿಗೆ ಹೋಲಿಸಿದರೆ, 24 ಕ್ಯಾರಟ್ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ಒಂದು ಸಾವಿರ ರುಪಾಯಿ ಇಳಿಕೆಯಾಗಿದೆ. 10 ಗ್ರಾಮ್ ಮೇಲೆ 10 ಸಾವಿರ ರುಪಾಯಿ ಇಳಿಕೆಯಾಗಿದೆ. ಕೆಲ ತಜ್ಞರ ಪ್ರಕಾರ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1550 ರುಪಾಯಿ ಇಳಿಕೆ
ಇನ್ನು ಆಭರಣ ಚಿನ್ನ ಎಂದು ಕರೆಸಿಕೊಳ್ಳುವ 22 ಕ್ಯಾರಟ್ ಚಿನ್ನದ ಬೆಲೆಯಲ್ಲಿಯೂ ಇಂದು ಮತ್ತೆ ಭಾರೀ ಇಳಿಕೆಯಾಗಿದೆ. ನಿನ್ನೆ 22 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 1550 ರುಪಾಯಿ ಇಳಿಕೆಯಾಗಿತ್ತು. ಇದೀಗ ಇಂದು 22 ಕ್ಯಾರಟ್ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1750 ರುಪಾಯಿ ಇಳಿಕೆಯಾಗಿದೆ. ಇದರೊಂದಿಗೆ ಇಂದು ಒಂದು ಗ್ರಾಮ್ ಚಿನ್ನದ ಬೆಲೆ 13,060 ರುಪಾಯಿಗಳಾಗಿದೆ.
56
ಚಿನ್ನ ಖರೀದಿಸಲು ಇದು ಸರಿಯಾದ ಸಮಯ
ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿ ಮಾಡುವವರಿಗೆ ಇದು ಸೂಕ್ತ ಸಮಯ. ಅವಶ್ಯಕತೆ ಇರುವಷ್ಟು ಚಿನ್ನ ಖರೀದಿ ಮಾಡಲು ಇದು ಸರಿಯಾದ ಸಮಯ. ದೀಪಾವಳಿ ಬಳಿಕ ಮತ್ತೆ ಚಿನ್ನದ ದರದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಗೋಲ್ಡ್ ಅಸೋಸಿಯೇಷನ್ ಅಧ್ಯಕ್ಷ ಟಿ.ಎ. ಶರವಣ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ.
66
ಬೆಳ್ಳಿ ಬೆಲೆಯಲ್ಲಿ 5 ಸಾವಿರ ರುಪಾಯಿ ಇಳಿಕೆ
ಇನ್ನು ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಕಳೆದ ಹತ್ತು ದಿನಗಳಲ್ಲಿ ಬೆಳ್ಳಿಯ ಬೆಲೆಯಲ್ಲಿ ಅಷ್ಟೇನೂ ಇಳಿಕೆಯಾಗಿಲ್ಲ. ಇಂದು ಒಂದು ಕೆಜಿ ಬೆಳ್ಳಿ ಬೆಲೆಯ ಮೇಲೆ ಐದು ಸಾವಿರ ರುಪಾಯಿ ಇಳಿಕೆಯಾಗಿತ್ತು. ಇಂದು ಒಂದು ಕೆಜಿ ಅಪ್ಪಟ ಬೆಳ್ಳಿ ಬೆಲೆ ₹2,20,000 ಗಳಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ