ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕೆಲೆವೆಡೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇತ್ತ ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು ಮಾಡಲಾಗಿದೆ.
ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟ ದೆಹಲಿಯಲ್ಲಿ ನಿನ್ನೆ ಮಳೆಯಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶ ನಿಗದಿಗಿಂತ ವಿಳಂಬವಾಗಿದೆ. ಇತ್ತ ಎಲ್ ನಿನೋ ಭೀತಿ ಸೇರಿದಂತೆ ಹಲವು ಅಡ್ಡಿ ಆತಂಕದ ನಡುವೆ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.
26
ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು
ಉತ್ತರಖಂಡದಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಈಗಾಗಲೇ ಉತ್ತರ ಖಂಡದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಿಮಾಲಯನ ತಪ್ಪಲು, ಹಿಮಾಲಯನ ಪರ್ವತ ಶಿಖರಗಳ ವಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರಖಂಡದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮುನ್ನಚ್ಚೆರಿಕಾ ಕ್ರಮವಾಗಿ ಸರ್ಕಾರ ಕೇದಾರನಾಥ ಯಾತ್ರೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
36
ಭಕ್ತರಿಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚನೆ
ಉತ್ತರಖಂಡದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಮೆಘಸ್ಫೋಟ ಸೇರಿದಂತೆ ಪ್ರವಾಹ ಪರಿಸ್ಥಿತಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಿದ್ದಂತೆ ಇದೀಗ ಸರ್ಕಾರ ಕೇದಾರನಾಥ ಭಕ್ತರಿಗೆ ಸೂಚನೆ ನೀಡಿದೆ. ದರ್ಶನಕ್ಕೆ ಬೆಟ್ಟದ ಮೂಲಕ ತೆರಳುತ್ತಿರುವ ಭಕ್ತರು ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಸೂಚನೆ ನೀಡಲಾಗಿದೆ.
ಮೇ.30ರ ಸಂಜೆ ದೆಹಲಿಯಲ್ಲಿ ಭಾರಿ ಮಳೆ ಸುರಿದಿದೆ. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ ಜನತೆ ನಿರಾಳರಾಗಿದ್ದಾರೆ. ಇತ್ತ ಇನ್ನು ಕೆಲ ದಿನಗಳ ಕಾಲ ದೆಹಲಿಯಲ್ಲಿ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ನಿನ್ನೆ ಸುರಿದು ಮಳೆ ಹಾಗೂ ಭಾರಿ ಗಾಳಿಗೆ ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ.
56
ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ
ಬೆಂಗೆಳೂರಿನಲ್ಲಿ ಕಳೆದ ಎರಡು ದಿನ ಸತತ ಮಳೆಯಾಗಿದೆ. ಭಾರಿ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ನೀರಿನಿಂದ ಜಲಾವೃತಗೊಂಡಿತ್ತು. ಬೆಂಗಳೂರಿನಲ್ಲಿ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
66
ಮುಂಗಾರು ಕ್ಷೀಣ, ರೈತರು ಕಂಗಾಲು
ಈ ಬಾರಿ ಮುಂಗಾರು ಕ್ಷೀಣಗೊಂಡಿದೆ. ಜೊತೆಗೆ ಎಲ್ ನಿನೋ ರೂಪುಗೊಂಡಿರುವ ಕಾರಣ ತೀವ್ರ ಮಳೆ ಕೊರತೆ ಕಾಣಲಿದೆ. ದಕ್ಷಿಣದಲ್ಲಿ ಭಾರಿ ಮಳೆ ಹಾಗೂ ಉತ್ತರದತ್ತ ಬರಗಾಲ ಪರಿಸ್ಥಿತಿಗೆ ಕಾರಣಾಗುವ ಸಾಧ್ಯತೆ ಹೆಚ್ಚಿದೆ. ಮುಂಗಾರು ಕ್ಷೀಣಗೊಂಡಿರುವ ಕಾರಣ ರೈತರು ಕಂಗಾಲಾಗಿದ್ದಾರೆ. ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ