ಕೊರೋನಾ ವೈರಸ್ ವರದಿ ನೆಗೆಟಿವ್ ಬಂದ ಹಿನ್ನೆಲೆ ಕೆಲ ದಿನಗಳ ಹಿಂದಷ್ಟೇ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಲಭ್ಯವಾದ ಮಾಹಿತಿ ಅನ್ವಯ ಅಮಿತ್ ಶಾರವರು ಕಳೆದ 3-4 ದಿನಗಳಿಂದ ಬಹಳ ದಣಿವು ಹಾಗೂ ಮೈ ಕೈ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಕೊರೋನಾ ವರದಿ ನೆಗೆಟಿವ್ ಬಂದ ಹಿನ್ನೆಲೆ ಅವರು ಡಿಸ್ಚಾರ್ಜ್ ಆಗಿ ಹೋಂ ಐಸೋಲೇಷನ್‌ನಲ್ಲಿದ್ದರು.
ಏಮ್ಸ್ ಬಿಡುಗಡೆಗೊಳಿಸಿರುವ ಹೆಲ್ತತ್ ಬುಲೆಟಿನ್ ಅನ್ವಯ ಅಮಿತ್ ಶಾರವರ ಆರೋಗ್ಯ ಸದ್ಯ ಸ್ಥಿರವಾಗಿದೆ, ಹಾಗೂ ಅವರು ಆಸ್ಪತ್ರೆಯಿಂದಲೇ ಎಲ್ಲಾ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಹೀಗಿರುವಾಗ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದಿದ್ದರು.
ಅಲ್ಲದೇ ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.