NEET ಪರೀಕ್ಷೆಯ ಅಕ್ರಮ ತಡೆಯಲು Telegram Appಗೆ ತಾತ್ಕಾಲಿಕ ನಿರ್ಬಂಧ; ಪ್ರಮುಖ ಫೀಚರ್ ನಿಷ್ಕ್ರಿಯ

Published : Jun 16, 2026, 11:04 AM IST

ನೀಟ್ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರವು ಭಾರತದಲ್ಲಿ ಟೆಲಿಗ್ರಾಂ ಬಳಕೆಯ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಇದರ ಭಾಗವಾಗಿ, ಮೆಸೇಜ್ ಎಡಿಟ್ ಫೀಚರ್ ಅನ್ನು ಸಹ ನಿಷ್ಕ್ರಿಯಗೊಳಿಸಲಾಗಿದೆ.

PREV
14
ಟೆಲಿಗ್ರಾಂ ಮೇಲೆ ತಾತ್ಕಾಲಿಕ ನಿರ್ಬಂಧ

ದೇಶದಾದ್ಯಂತ ನೀಟ್ ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಇದರ ಭಾಗವಾಗಿ ಭಾರತದಲ್ಲಿ ಜನಪ್ರಿಯ ಮೆಸೇಜಿಂಗ್ ಆ್ಯಪ್ ಆದ ಟೆಲಿಗ್ರಾಂ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಿದೆ.

24
ಮೆಸೇಜ್ ಎಡಿಟ್ ಫೀಚರ್

ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಂಚನೆಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬಳಕೆಯನ್ನು ಸೀಮಿತಗೊಳಿಸಿದೆ. ಅಷ್ಟೇ ಅಲ್ಲ, ಜೂನ್ 30ರವರೆಗೆ ಭಾರತದಲ್ಲಿ ಟೆಲಿಗ್ರಾಂನ 'ಮೆಸೇಜ್ ಎಡಿಟ್' ಫೀಚರ್ ಅನ್ನು ಕೂಡ ನಿಷ್ಕ್ರಿಯಗೊಳಿಸಲಾಗಿದೆ.

34
ಪ್ರಶ್ನೆಪತ್ರಿಕೆ ಸೋರಿಕೆ

ಈಗಾಗಲೇ ಅಧಿಕಾರಿಗಳು ಹಲವು ಟೆಲಿಗ್ರಾಂ ಚಾನೆಲ್‌ಗಳು ಮತ್ತು ಬಾಟ್‌ಗಳನ್ನು ತೆಗೆದುಹಾಕಿದ್ದಾರೆ. ‘NEET ಪೇಪರ್ ಲೀಕ್’ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಲವಾರು ಚಾನೆಲ್‌ಗಳನ್ನು ಬಂದ್ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ವಿವಿಧ ರಾಜ್ಯಗಳಲ್ಲಿ ತನಿಖೆ ಚುರುಕುಗೊಂಡಿದೆ.

44
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ

ಇನ್ನೊಂದೆಡೆ, ಪ್ರಶ್ನೆಪತ್ರಿಕೆ ನೀಡುವುದಾಗಿ ಬರುವ ಆಮಿಷಗಳು ಸಂಪೂರ್ಣ ಸುಳ್ಳು ಮತ್ತು ವಂಚನೆಯಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಸ್ಪಷ್ಟಪಡಿಸಿದೆ. ಇಂತಹ ವಂಚಕರ ಜಾಲಕ್ಕೆ ಬೀಳದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories