ತಮ್ಮ ಸಮಾಜಮುಖಿ ಕಾರ್ಯಗಳಿಂದ ಸದಾ ಜನರ ಮೆಚ್ಚುಗೆ ಪಾತ್ರರಾಗುವ ಇನ್ಫೋಸಿಸ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ (Sudha Murthy) ಅಮ್ಮನವರು ತಿರುಮಲ ತಿರುಪತಿ ದೇವಸ್ಥಾನಕ್ಕೆ (TTD) ಸುಮಾರು 42 ಲಕ್ಷ ವೆಚ್ಚದ ಧರ್ಮರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಸುಧಾಮೂರ್ತಿ ಅವರ ಸೋದರಿ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸ್ನೇಹಿತರು ಬಂಧು ಮಿತ್ರರು ಹಾಜರಿದ್ದರು. ಈ ಧರ್ಮರಥವು ತಿರುಪತಿಯ ಸುತ್ತಮುತ್ತ ಹಳ್ಳಿ ಪ್ರದೇಶಗಳಿಗೆ ಪ್ರವೇಶ ಮಾಡುವ ಮೂಲಕ ಭಕ್ತರಿಗೆ ಶ್ರೀನಿವಾಸನ ದರ್ಶನ ನೀಡಲಿದೆಯಂತೆ.
ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅತಿಹೆಚ್ಚು ದೇಣಿಗೆ ನೀಡುವ ಮೂಲಕ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಸುಧಾ ಮೂರ್ತಿ. ಹೀಗಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸತ್ಕಾರ್ಯ ಮಾಡುತ್ತಿರುವ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ರಾಷ್ಟ್ರಪತಿಯಾಗಬೇಕೆಂದು ಅಭಿಪ್ರಾಯ ಇತ್ತಿಚೆಗೆ ವ್ಯಕ್ತವಾಗಿತ್ತು.
ತಿರುಪತಿ ವೆಂಕಟೇಶ್ವರನಿಗೆ ಭಕ್ತರು ಹಣ, ಚಿನ್ನ, ವಜ್ರ ವೈಡೂರ್ಯಗಳನ್ನು ದೇಣಿಗೆ ರೂಪದಲ್ಲಿ ನೀಡುವುದು ಸಾಮಾನ್ಯ. ಈಗ ಸುಧಾಮೂರ್ತಿ ಅಮ್ಮನವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸುಮಾರು 42 ಲಕ್ಷ ವೆಚ್ಚದ ಧರ್ಮರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ. ಸುಧಾಮೂರ್ತಿ ಅವರ ಈ ಕಾರ್ಯಕ್ಕೆ ಜನಮಾನಸದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ
ಇದನ್ನೂ ಓದಿ: ಪ್ರಧಾನಿ ಮೋದಿ ಒಬ್ಬ ಮಹಾನ್ ನಾಯಕ: ಸುಧಾಮೂರ್ತಿ ಶ್ಲಾಘನೆ