ಶ್ರೀ ರಾಮ ಮಂದಿರ ಉದ್ಘಾಟಾನೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ.
ರಾಮ ಮಂದಿರ ಉದ್ಘಾಟನೆಯ ಪ್ರಮುಖ ಘಟ್ಟವಾಗಿರುವ ರಾಮ ಲಲ್ಲಾ ಪ್ರಾಣಪ್ರತಿಷ್ಠೆಗೆ ಬರೋಬ್ಬರಿ 6,000 ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಸಂತರು, ಹಿಂದೂ ಧಾರ್ಮಿಕ ಗುರುಗಳು ಸೇರಿದಂತೆ 6,000 ಮಂದಿಗೆ ಆಮಂತ್ರಣ ನೀಡಲಾಗುತ್ತಿದೆ.
ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಂಚಿಕೆ ಆರಂಭಗೊಂಡಿದ್ದು, ಹಲವರು ಸಂತರು, ಹಿಂದೂ ಮುಖಂಡರು ಪತ್ರಿಕೆ ಸ್ವೀಕರಿಸಿದ್ದಾರೆ. ದೇಶದ ಮೂಲೆ ಮೂಲೆಗೆ ಈ ಪತ್ರಿಕೆ ತಲುಪಲಿದೆ.
ಮಂತ್ರಾಕ್ಷತೆ ಪ್ರಸಾದವನ್ನು ದೇಶದ ಮೂಲೆ ಮೂಲಗೆ ಹಂಚಲಾಗುತ್ತಿದೆ. ಕರ್ನಾಟಕಕದಲ್ಲೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮಂತ್ರಾಕ್ಷತೆ ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಜ.22ರಂದು ನಡೆಯಲಿರುವ ಆಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ಎಲ್ಲಾ ದೇವಸ್ಥಾನಗಳಲ್ಲಿ ಎಲ್ಇಡಿ ಪರದೆ ಮೂಲಕ ಬಿತ್ತರಿಸಲು ಎಲ್ಲಾ ಕಯಾರಿ ನೆಡಸಲಾಗಿದೆ.
ಆಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣಪ್ರತಿಷ್ಠೆ ಹಾಗೂ ಉದ್ಘಾಟನಾ ದಿನ ಪ್ರತಿ ಮನೆಯಲ್ಲಿ ದೀಪ ಹಚ್ಚಲು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.
ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಬಳಿಕ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಆಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದ್ದರು. ಇದೀಗ ಭವ್ಯ ಮಂದಿರ ನಿರ್ಮಾಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿದೆ.