ದೇಶದಲ್ಲಿ ಇಂಧನ ಸಂಗ್ರಹದ ಕೊರತೆ ಇದ್ಯಾ? ಕೇಂದ್ರ ಸಚಿವ ಪುರಿ ಸ್ಪಷ್ಟನೆ

Published : Jun 17, 2025, 08:27 AM IST

ಇರಾನ್-ಇಸ್ರೇಲ್ ಯುದ್ಧದ ನಡುವೆಯೂ ಭಾರತದಲ್ಲಿ ಮುಂದಿನ ಕೆಲ ತಿಂಗಳಿಗೆ ಬೇಕಾದಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

PREV
14

‘ಇರಾನ್‌-ಇಸ್ರೇಲ್‌ ನಡುವೆ ಯುದ್ಧ ನಡೆಯುತ್ತಿದ್ದರೂ ಭಾರತದಲ್ಲಿ ಮುಂದಿನ ಕೆಲ ತಿಂಗಳಿಗೆ ಬೇಕಾದಷ್ಟು ಇಂಧನ ಸಂಗ್ರಹ ಇದೆ’ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

24

ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ಮತ್ತು ಇಂಧನ ಕ್ಷೇತ್ರದಲ್ಲಿ ಸಾರ್ವಜನಿಕ ವಲಯದ ಉದ್ಯಮಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ ಬಳಿಕ ಹೇಳಿಕೆ ನೀಡಿರುವ ಪುರಿ, ‘ಭಾರತದ ಇಂಧನ ಕ್ಷೇತ್ರವು ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಇಂಧನ ಲಭ್ಯತೆ, ಕೈಗೆಟುಕುವಿಕೆ ಮತ್ತು ಸುಸ್ಥಿರತೆಯನ್ನು ಯಶಸ್ವಿಯಾಗಿ ರೂಪಿಸಿದೆ’ ಎಂದಿದ್ದಾರೆ.

34

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ 4ನೇ ದಿನವಾದ ಸೋಮವಾರ ಮತ್ತಷ್ಟು ತಾರಕಕ್ಕೇರಿದ್ದು ಎರಡೂ ದೇಶಗಳು ಹಗಲು-ರಾತ್ರಿ ದಾಳಿ-ಪ್ರತಿದಾಳಿ ಮುಂದುವರಿಸಿವೆ. 

44

ಇಸ್ರೇಲ್ ಮೇಲೆ ಇರಾನ್ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನವರೆಗೆ 100 ಕ್ಷಿಪಣಿ ಬಳಸಿ ಭಾರಿ ದಾಳಿ ನಡೆಸಿದೆ. ಈ ವೇಳೆ ಇಸ್ರೇಲ್‌ನ 5 ಜನರು ಸಾವನ್ನಪ್ಪಿದ್ದು. ಡಜನ್‌ಗಟ್ಟಲೆ ಜನರಿಗೆ ಗಾಯಗಳಾಗಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories