BJP ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ IPS ಅಧಿಕಾರಿ ಅಣ್ಣಾಮಲೈ ಸಂಪತ್ತು ಇಷ್ಟೊಂದಾ? ADR ರಿಪೋರ್ಟ್‌ನಲ್ಲಿ ಬಯಲಾಯ್ತು ಸತ್ಯ

Published : Jun 04, 2026, 03:11 PM IST

ಬೆಂಗಳೂರು: ಕರ್ನಾಟಕದ ದಕ್ಷ ಐಪಿಎಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಕುಪ್ಪುಸ್ವಾಮಿ ಅಣ್ಣಾಮಲೈ, ತಮಿಳುನಾಡಿನ ಬಿಜೆಪಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಇದೀಗ ಕೆ ಅಣ್ಣಾಮಲೈ ಅವರ ಸಂಪತ್ತು ಎಷ್ಟು ಎನ್ನುವುದರ ಬಗ್ಗೆ ಚರ್ಚೆಯಾಗುತ್ತಿದೆ. ಈ ಕುರಿತಾದ ಇಂಟ್ರೆಸ್ಟಿಂಗ್ ಡೀಟೈಲ್ಸ್ ಇಲ್ಲಿದೆ ನೋಡಿ. 

PREV
16
ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಕೆ ಅಣ್ಣಾಮಲೈ

ಕರ್ನಾಟಕದ ಅತ್ಯಂತ ಜನಪ್ರಿಯ ಐಪಿಎಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಕೆ ಅಣ್ಣಾಮಲೈ ತಮ್ಮ ಐಪಿಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಕಟ್ಟುವ ಕೆಲಸಕ್ಕೆ ಮುಂದಾಗಿದ್ದರು. ಆದರೆ ತಮಿಳುನಾಡಿನಲ್ಲಿನ ಇತ್ತೀಚೆಗಿನ ಬೆಳವಣಿಗೆಗಳಿಂದ ಮನನೊಂದು ಬಿಜೆಪಿ ಪಕ್ಷಕ್ಕೆ ವಿದಾಯ ಘೋಷಿಸಿದ್ದಾರೆ.

26
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಲ್ಲಿರುವ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಪ್ರತಿದಿನ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದ ಅಣ್ಣಾಮಲೈ, ಆ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಇನ್ನು ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈಗೆ ಬಿಜೆಪಿಯಿಂದ ಟಿಕೆಟ್ ಕೂಡಾ ಸಿಕ್ಕಿರಲಿಲ್ಲ. ಇನ್ನು ಕೇಂದ್ರ ಹಾಗೂ ರಾಜ್ಯ ಬಿಜೆಪಿಯ ತಾಳಮೇಳದ ಕೊರತೆಯಿಂದಾಗಿ ಅಣ್ಣಮಲೈ ಇದೀಗ ಬಿಜೆಪಿ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟುವತ್ತ ಗಮನ ಹರಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಜೋರಾಗಿದೆ.

36
ಪ್ರಾದೇಶಿಕ ಪಕ್ಷ ಕಟ್ಟಲು ಅಣ್ಣಾಮಲೈ ಚಿಂತನೆ

ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆಯಲ್ಲಿರುವ ಕೆ ಅಣ್ಣಾಮಲೈ ಅವರ ಒಟ್ಟು ಸಂಪತ್ತು ಎಷ್ಟಿರಬಹುದು ಎನ್ನುವ ಕುತೂಹಲ ನಿಮ್ಮನ್ನೂ ಕಾಡುತ್ತಿರಬಹುದು. 2024ರಲ್ಲಿ ಬಿಜೆಪಿ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಾಗ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಎಷ್ಟು ಎನ್ನುವ ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದರು.

46
ಕೆ ಅಣ್ಣಾಮಲೈ ಒಟ್ಟು ಆಸ್ತಿ ಎಷ್ಟು?

ADR ಅಂದರೆ ಅಸೋಸಿಯೇಷನ್ ಪಾರ್ ಡೆಮೊಕ್ರಾಟಿಕ್ 2024ರ ರಿಪೋರ್ಟ್ ಪ್ರಕಾರ ಅಣ್ಣಾಮಲೈ ಅವರ ಒಟ್ಟು ಸಂಪತ್ತು 4 ಕೋಟಿ, 7 ಲಕ್ಷದ 26 ಸಾವಿರದ 627(4,07,26,627)ರುಪಾಯಿಗಳು. ಇದರದಲ್ಲಿ ಚರಾಸ್ತಿ ₹2,42,26,627 ಆದರೆ, ಸ್ಥಿರ ಆಸ್ತಿ ಒಂದು ಕೋಟಿ 65 ಲಕ್ಷ ರುಪಾಯಿಗಳಾಗಿವೆ.

56
2011ರ ಬ್ಯಾಚ್ ಐಪಿಎಸ್‌ ಅಧಿಕಾರಿ ಅಣ್ಣಾಮಲೈ:

ಅಂದಹಾಗೆ 41 ವರ್ಷದ ಅಣ್ಣಾಮಲೈ 2011ರ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಕರ್ನಾಟಕದಾದ್ಯಂತ ಜನಪ್ರಿಯತೆ ಗಳಿಸಿದ್ದ ಅಣ್ಣಾಮಲೈ ದಿಢೀರ್ ಎನ್ನುವಂತೆ 2019ರಲ್ಲಿ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

66
ಇನ್ನೂ ಅಣ್ಣಾಮಲೈ ರಾಜೀನಾಮೆ ಅಂಗೀಕರಿಸದ ಬಿಜೆಪಿ

ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ಣಾಮಲೈ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ ಬಿಜೆಪಿ ಇನ್ನೂ ಅಣ್ಣಾಮಲೈ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎನ್ನಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories