ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಮಗಳು ವೀಣಾ ಥಯಿಕ್ಕಂಡಿಯಿಲ್ ಮದುವೆ ಡಿವೈಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಮುಹಮ್ಮದ್ ರಿಯಾಸ್ ಜೊತೆ ನಡೆದಿದೆ.
ಕೇವಲ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಈ ವಿವಾಹ ನಡೆದಿದೆ.
ವಿಶೇಷ ವಿವಾಹ ಕಾಯ್ಡೆಯಡಿ ಸಿಎಂ ಮಗಳು ವೀಣಾ ಅವರ ಮದುವೆಯನ್ನು ರಿಜಿಸ್ಟರ್ ಮಾಡಲಾಗಿದೆ.
ಸಿಎಂ ಪಿಣರಾಯಿ ವಿಜಯನ್ ಅಧಿಕೃತ ನಿವಾಸದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಇವರಿಬ್ಬರು ರಿಜಿಸ್ಟರ್ ಮದುವೆಯಾಗಿದ್ದಾರೆ.
ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳ ಸದಸ್ಯರು ಮತ್ತು ಆಪ್ತ ಸ್ನೇಹಿತರು ಮಾತ್ರ ಈ ವಿವಾಹದಲ್ಲಿ ಭಾಗಿಯಾಗಿದ್ದರು.
ಸಿಎಂ ಸರ್ಕಾರಿ ನಿವಾಸದಲ್ಲಿ ನಡೆದ ಮೊದಲ ಮದುವೆಯಾಗಿದೆ.
ರಿಯಾಸ್ ತನ್ನ ಮೊದಲ ಪತ್ನಿ ಡಾ. ಸಮೀಹಾಗೆ 2015ರಲ್ಲಿ ವಿಚ್ಛೇದನ ನೀಡಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಇನ್ನು ವೀಣಾ ಐದು ವರ್ಷದ ಹಿಂದೆ ತನ್ನ ಮೊದಲ ಗಂಡನಿಂದ ದೂರವಾಘಿದ್ದಾರೆ. ಇವರಿಗೆ ಓರ್ವ ಮಗನಿದ್ದಾನೆ ಎಂದು ವರದಿಯೊಂದರಲ್ಲಿ ಪ್ರಕಟವಾಗಿದೆ.
ಇನ್ನು ಬೆಂಗಳೂರಿನ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ವೀಣಾ ರಾಜಕೀಯದಿಂದ ಕೊಂಚ ದೂರವೇ ಉಳಿದಿದ್ದಾರೆ. ಅತ್ತ ರಿಯಾಸ್ 2009ರ ಲೋಕಸಭೆ ಚುನಾವಣೆಯಲ್ಲಿ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.