ತಿರುಮಲೆಗೆ ಹೊರಡಬೇಕಿದ್ದ ವಿಶಾಖಪಟ್ಟಣಂ- ಕೊರಬಾ ಎಕ್ಸ್‌ಪ್ರೆಸ್ ಪ್ಲಾಟ್‌ಫಾರಂನಲ್ಲಿ ಬಂದು ನಿಂತಿತ್ತು. ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಪಸರಿಸಿತ್ತು.
ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ನಿಲ್ದಾಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ಲಾಟ್‌ಫಾರಂನಲ್ಲಿದ್ದ ಪ್ರಯಾಣಿಕರು ಭಯಗೊಂಡು ನಿಲ್ದಾಣದಿಂದ ಹೊರಗೆ ಓಡಿ ಬಂದಿದ್ದಾರೆ.
ಅವಘಡ ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ತುರ್ತು ಸಿಬ್ಬಂದಿ ಕಾರ್ಯಪ್ರವೃತ್ತರಾಗಿ ಬೆಂಕಿ ನಿಯಂತ್ರಣಕ್ಕೆ ತರಲು ಸಫಲರಾಗಿದ್ದಾರೆ. ಅದಾಗಲೇ ಬೋಗಿಯಲ್ಲಿ ಕುಳಿತಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ವರದಿಗಳ ಪ್ರಕಾರ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ರೈಲು ತಿರುಮಲಕ್ಕೆ ಹೋಗಲು ಪ್ಲಾಟ್‌ಫಾರಂನಲ್ಲಿ ನಿಂತಿತ್ತು. ಪ್ರಯಾಣಿಕರು ಸಹ ತಮ್ಮ ಆಸನಗಳಲ್ಲಿ ಕುಳಿತುಕೊಳ್ಳಲು ಆರಂಭಿಸಿದ್ದರು. ಮೊದಲು ಎಸಿ ಕೋಚ್‌ನಲ್ಲಿ ಹೊಗೆ ಕಾಣಿಸಿತು. ಕೆಲವೇ ಸಮಯದಲ್ಲಿ ನಾಲ್ಕು ಎಸಿ ಕೋಚ್‌ಗಳಿಗೆ ಬೆಂಕಿ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕಾಗಮಿಸಿದ ರೈಲು ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿ, ಎಲ್ಲಾ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. (ಸಾಂದರ್ಭಿಕ ಚಿತ್ರ)
ರೈಲಿನ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಸಾಧ್ಯತೆಗಳಿವೆ. ಈ ಸಂಬಂಧ ತನಿಖೆಗೆ ಆದೇಶ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಶಾಖಪಟ್ಟಣಂ- ಕೊರಬಾ ಎಕ್ಸ್‌ಪ್ರೆಸ್ ಪ್ರಯಾಣ ರದ್ದುಗೊಳಿಸಲಾಗಿದೆ. (ಸಾಂದರ್ಭಿಕ ಚಿತ್ರ)
ಕಳೆದ ಒಂದೆರಡು ದಿನಗಳಿಂದ ಭಾರತದಲ್ಲಿ ರೈಲುಗಳು ತಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ಲೋಕಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದ ವಿಪಕ್ಷ ನಾಯಕರು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. (ಸಾಂದರ್ಭಿಕ ಚಿತ್ರ)