ಪರಿಸ್ಥಿತಿಗೆ ಹೀಗೆ ಮುಂದುವರಿದರೆ ಲಾಕ್‌ಡೌನ್; ಆರೋಗ್ಯ ಸಚಿವರ ಖಡಕ್ ವಾರ್ನಿಂಗ್!

First Published Mar 15, 2021, 8:09 PM IST

ಕೊರೋನಾ ವೈರಸ್ ಮಿತಿ ಮೀರುತ್ತಿದೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಕೆಲ ರಾಜ್ಯದ ಕೆಲ ಜಿಲ್ಲೆಗಳು ಲಾಕ್‌ಡೌನ್ ಆಗಿವೆ. ಕೆಲ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದೀಗ ಪರಿಸ್ಥಿತಿ ಹೀಗೆ ಮುಂದುವರಿದರೆ ಲಾಕ್‌ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಭಾರತದಲ್ಲಿ ಕೊರೋನಾ ಭೀತಿ ಮತ್ತೆ ಹೆಚ್ಚಾಗಿದೆ. ಭಾನುವಾರ(ಮಾ.14) ಒಂದೇ ದಿನ 16,620 ಪ್ರಕರಣ ದಾಖಲಾಗಿದೆ. ಇತ್ತ ಮಹಾರಾಷ್ಟ್ರದಲ್ಲಿ ಕೊರೋನಾ ಜನರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.
undefined
ನಾಗ್ಪುರ ಈಗಾಗಲೇ ಲಾಕ್‌ಡೌನ್ ಆಗಿದೆ. ಪುಣೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಆದರೆ ಜನರ ನಿರ್ಲಕ್ಷ್ಯ ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಹೆಚ್ಚಿನ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನಿವಾರ್ಯವಾಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಎಚ್ಚರಿಕೆ ನೀಡಿದ್ದಾರೆ.
undefined
ಕೊರೋನಾ ಮಾರ್ಗಸೂಚಿಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಬೇಕು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಹೀಗಾಗಿ ಅನಿವಾರ್ಯ ಪರಿಸ್ಥಿತಿ ತಂದಿಡಬೇಡಿ ಎಂದು ರಾಜೇಶ್ ತೊಪೆ ಹೇಳಿದ್ದಾರೆ.
undefined
ಮುಂಬೈನಲ್ಲಿ ಭಾನುವಾರ ಒಂದೆ ದಿನ 1,963 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಇದುವರೆಗೆ ಮುಂಬೈನಲ್ಲಿ ಕಟ್ಟು ನಿಟ್ಟಿನ ಕ್ರಮ ಘೋಷಿಸಿಲ್ಲ. ಪ್ರಕರಣಗಳ ಸಂಖ್ಯೆ ಹೀಗೆ ಮುಂದುವರಿದರೆ ಲಾಕ್‌ಡೌನ್ ಚಿಂತಿಸಬೇಕಾಗುತ್ತೆ ಎಂದು ರಾಜೇಶ್ ತೊಪೆ ಹೇಳಿದ್ದಾರೆ.
undefined
ಮುಂದಿನ 48 ಗಂಟೆಗಳ ಕಾಲ ಅಧಿಕಾರಿಗಳು, ತಜ್ಞ ವೈದ್ಯರ ತಂಡ ಸೂಕ್ಷ್ಮವಾಗಿ ಗಮನಿಸಲಿದೆ. ಮಂಗಳವಾರ ಸಂಜೆ ಮುಂದಿನ ನಿರ್ಧಾರ ಕುರಿತು ಚರ್ಚಿಸಲಾಗುವುದು ಎಂದು ಮುಂಬೈ ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.
undefined
ಕರ್ನಾಟಕದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೋನಾ ಪ್ರಕರಣ ಹೆಚ್ಚಾದ ಕಾರಣ ಈ ಎರಡೂ ರಾಜ್ಯದ ಜೊತೆ ನಿಕಟ ಸಂಪರ್ಕ ಹೊಂದಿರುವ ಕರ್ನಾಟಕದಲ್ಲೂ ಹೆಚ್ಚಾಗುತ್ತಿದೆ.
undefined
click me!