ಫೆ.22ಕ್ಕೆ ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ, ಬಿಜೆಪಿ ಸೇರಲಿದ್ದಾರೆ ಮಾಜಿ ರಾಜ್ಯಾಧ್ಯಕ್ಷ ಎಂದ ಸಿಎಂ

Published : Feb 17, 2026, 08:46 PM IST

ಫೆ.22ಕ್ಕೆ ಕಾಂಗ್ರೆಸ್ ಮತ್ತೊಂದು ವಿಕೆಟ್ ಪತನ, ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ರಾಜ್ಯ ಅಧ್ಯಕ್ಷ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಸಿಎಂ ನೀಡಿದ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. 

PREV
15
ಕಾಂಗ್ರೆಸ್ ವಿಕೆಟ್ ಪತನ

ಕಾಂಗ್ರೆಸ್ ಪಕ್ಷದಲ್ಲಿ ಮತ್ತೊಂದು ಕೋಲಾಹಲಕ್ಕೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 22 ರಂದು ಕಾಂಗ್ರೆಸ್ ಪ್ರಮುಖ ನಾಯಕ ಬಿಜೆಪಿ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಹೌದು, ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಸ್ಸಾಂ ಕಾಂಗ್ರೆಸ್‌ನಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಹಿರಿಯ ನಾಯಕ ಭೂಪೆನ್ ಕುಮಾರ್ ಬೋರಾ ಮತ್ತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂದಿದ್ದಾರೆ.

25
ಕಾಂಗ್ರೆಸ್ ರಾಜೀನಾಮೆ ನೀಡಿದ್ದ ಭೂಪೆನ್

ಎರಡು ದಿನದ ಹಿಂದೆ ಭೂಪೆನ್ ಕುಮಾರ್ ಬೋರಾ ಅಸ್ಸಾಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ರಾಜೀನಾಮೆ ಪತ್ರ ರವಾನಿಸಿದ್ದರು. ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಅಸ್ಸಾಂ ಕಾಂಗ್ರೆಸ್ ನಾಯಕರು ಭೂಪೆನ್ ಕುಮಾರ್ ಬೋರಾ ಭೇಟಿಯಾಗಿ ಮನ ಒಲಿಸಿದ್ದರು. ಹೀಗಾಗಿ ರಾಜೀನಾಮೆ ಪತ್ರ ಹಿಂಪಡೆದಿದ್ದರು.

35
ಹಿಮಂತ ಬಿಸ್ವ ಶರ್ಮಾ ಸ್ಫೋಟಕ ಹೇಳಿಕೆ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈಗಾಗಲೇ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 22ರಂದು ಭೂಪೆನ್ ಕುಮಾರ್ ಬೋರಾ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿಕೊಳ್ಳಲಿದ್ದಾರೆ. ಮೂರು ವರ್ಷಗಳ ಹಿಂದೆ ಬಿಜೆಪಿ ಸೇರಿಕೊಳ್ಳಲು ನಿರ್ಧರಿಸಿದ್ದರು. ಕೆಲ ಕಾರಣಗಳಿಂದ ಮಂದೂಡಿಕೆಯಾಗಿತ್ತು ಎಂದು ಶರ್ಮಾ ಹೇಳಿದ್ದಾರೆ.

45
ಅಸ್ಸಾಂ ಕಾಂಗ್ರೆಸ್ ಪಕ್ಷದಲ್ಲಿರುವ ಏಕೈಕ ಹಿಂದೂ

ಭೂಪೆನ್ ಕುಮಾರ್ ಬೋರಾ ಅಸ್ಸಾಂ ಕಾಂಗ್ರೆಸ್ ಪಕ್ಷದಲ್ಲಿರುವ ಏಕೈಕ ಹಿಂದೂ ನಾಯಕ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದರು. ಭೂಪೆನ್ ಬೋರಾಗೆ ಕಾಂಗ್ರೆಸ್ ಒಳಗಿನ ರಾಜಕೀಯದಿಂದ ಬೇಸತ್ತಿದ್ದಾರೆ. ಎರಡು ದಿನದ ಹಿಂದೆ ನೀಡಿದ್ದ ರಾಜೀನಾಮೆ ಪತ್ರದಲ್ಲಿ ಭೂಪೆನ್ ಕುಮಾರ್ ಕೆಲ ವಿಚಾರಗಳನ್ನು ಉಲ್ಲೇಖಿಸಿದ್ದರು. ಅಸ್ಸಾಂ ನಾಯಕರು, ಕಾಂಗ್ರೆಸ್ ಹೈಕಮಾಂಡ್ ಕೂಡ ಭೂಪೆನ್ ಕುಮಾರ್ ಅವರನ್ನು ನಿರ್ಲಕ್ಷಿಸಿರುವ ಕುರಿತು ಉಲ್ಲೇಖಿಸಿದ್ದರು.

55
ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ

ಭೂಪೆನ್ ಕುಮಾರ್ ಬೋರಾ ಮತ್ತೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಸೇರಿಕೊಂಡರೆ ಅದು ಅಸ್ಸಾಂ ಕಾಂಗ್ರೆಸ್ ಮಾತ್ರವಲ್ಲ, ಕೇಂದ್ರ ಕಾಂಗ್ರೆಸ್‌ಗೂ ತೀವ್ರ ಹಿನ್ನಡೆಯಾಗಲಿದೆ. ಅಸ್ಸಾಂ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಪಕ್ಷಾಂತರ ಕಾಂಗ್ರೆಸ್‌ಗೆ ಹಿನ್ನಡೆ ಮಾಡಲಿದೆ.ಇತ್ತ ರಾಹುಲ್ ನಾಯಕತ್ವದ ವಿರುದ್ದ ಈಗಾಗಲೇ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ಕಾಂಗ್ರೆಸ್ ಪಕ್ಷವನ್ನು ಕಂಗಾಲು ಮಾಡಲಿದೆ.

ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories