ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಇಕ್ಕಟ್ಟಾದ ಬೀದಿಯಲ್ಲಿದ್ದ ಈ ಹೋಟೆಲ್‌ನಲ್ಲಿ ದಟ್ಟ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸವಾಲಾಗಿತ್ತು.
ನವದೆಹಲಿ: ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
24
30ಕ್ಕೂ ಹೆಚ್ಚು ಜನರ ರಕ್ಷಣೆ
ಹೋಟೆಲ್‌ನಲ್ಲಿ ಹೆಚ್ಚು ಜನರಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯದ ವರದಿಗಳ ಪ್ರಕಾರ, 30ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ದಟ್ಟಹೊಗೆ ಆವರಿಸಿದ್ದರಿಂದ ಆರಂಭದಲ್ಲಿ ರಕ್ಷಣಾ ಕಾರ್ಯಾಚರಣೆ ಸವಾಲಾಗಿತ್ತು. ಈ ಹೋಟೆಲ್ ಇಕ್ಕಟ್ಟಾದ ಬೀದಿಯಲ್ಲಿದ್ದ ಕಾರಣ, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಲು ಕಷ್ಟವಾಗಿತ್ತು.
34
ವಿದೇಶಿ ಪ್ರಜೆಗಳು ಸಿಲುಕಿರುವ ಶಂಕೆ
ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಕೆಲವರು ಕಟ್ಟಡದ ಮೇಲಿಂದ ಕೆಳಗೆ ಹಾರಿದ್ದಾರೆ. ಸ್ಥಳೀಯರ ಪ್ರಕಾರ, ಸುಮಾರು 25 ರೂಮ್‌ಗಳಿರುವ ಈ ಹೋಟೆಲ್‌ನಲ್ಲಿ ಘಟನೆ ನಡೆದಾಗ ಸಾಕಷ್ಟು ಅತಿಥಿಗಳಿದ್ದರು. ಇವರಲ್ಲಿ ಹೆಚ್ಚಿನವರು ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ವಿದೇಶಿ ಪ್ರಜೆಗಳಾಗಿದ್ದರು. ಬೆಳಗ್ಗೆ ಹೆಚ್ಚಿನವರು ನಿದ್ದೆಯಲ್ಲಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದ್ದರಿಂದ ಅನಾಹುತದ ತೀವ್ರತೆ ಹೆಚ್ಚಾಗಿದೆ. ಹೋಟೆಲ್‌ನ ಕೆಳ ಅಂತಸ್ತಿನಲ್ಲಿ ಒಂದು ರೆಸ್ಟೋರೆಂಟ್ ಕೂಡ ಇದೆ.
ಹೋಟೆಲ್‌ಗೆ ಬೆಂಕಿ ಬಿದ್ದ ತಕ್ಷಣ ನಾನು ಮಾಹಿತಿ ನೀಡಿದೆ. ಹೊರಗೆ ಬಂದು ನೋಡಿದಾಗ ಇಡೀ ಹೋಟೆಲ್‌ಗೆ ಬೆಂಕಿ ಆವರಿಸಿತ್ತು. ಹೇಗೆ ಅಂತ ಗೊತ್ತಿಲ್ಲ, ನಾನು ಹೇಗೋ ಅಲ್ಲಿಂದ ಓಡಿಬಂದು ಪ್ರಾಣ ಉಳಿಸಿಕೊಂಡೆ" ಎಂದು ಹೋಟೆಲ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ