ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಪ್ರಕಾರ, ಇಂದು ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಮೈತ್ರಿಕೂಟ 352 ಸ್ಥಾನಗಳನ್ನು ಗೆಲ್ಲಲಿದೆ. ಇದಕ್ಕೆ ಪ್ರತಿಯಾಗಿ, ಇಂಡಿಯಾ ಒಕ್ಕೂಟವು 182 ಸ್ಥಾನಗಳಿಗೆ ಕುಸಿಯಲಿದೆ ಎಂದು ಸಮೀಕ್ಷೆ ತಿಳಿಸಿದೆ.
2024ರ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರು ‘ಅಬ್ಕಿ ಬಾರ್ 400 ಪಾರ್’ ಘೋಷಣೆ ಮೂಲಕ ಪ್ರಚಾರ ನಡೆಸಿದ್ದರು. ಆದರೆ ಎನ್‌ಡಿಎ 293 ಸ್ಥಾನಗಳಲ್ಲಿ ಜಯ ಗಳಿತ್ತು.
57
2026ರಲ್ಲೂ ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ದೇಶಾದ್ಯಂತ ಎನ್‌ಡಿಎ ಪರ ಜನರ ಒಲವಿದ್ದು, ಇಂದು ಚುನಾವಣೆಯೇನಾರೂ ನಡೆದರೆ 352 ಸ್ಥಾನಗಳಲ್ಲಿ ಜಯ ಸಾಧಿಸಲಿದೆ.
67
ಆದರೆ 2024ರಲ್ಲಿ 234 ಸ್ಥಾನ ಗಳಿಸಿದ್ದ ಇಂಡಿಯಾ ಒಕ್ಕೂಟ ಕೇವಲ 182 ಸ್ಥಾನಗಳಿಗೆ ತೃಪ್ತಿ ಪಡಲಿದೆ ಎಂದು ಸಮೀಕ್ಷೆ ತಿಳಿಸಿದೆ. ಈ ವರ್ಷ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಸಮೀಕ್ಷೆ ಗಮನ ಸೆಳೆದಿದೆ.
77
2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ 293 ಸ್ಥಾನ ಸಂಪಾದಿಸಿದ್ದರೆ, ಇಂಡಿಯಾ ಒಕ್ಕೂಟ 234 ಸ್ಥಾನ ಗೆದ್ದಿದೆ. ಮೂಡ್ ಆಫ್ ದಿ ನೇಷನ್ ಪ್ರಕಾರ ಈಗ ಚುನಾವಣೆ ನಡೆದರೆ ಎನ್‌ಡಿಎ 352 ಸ್ಥಾನ ಗೆಲ್ಲಲಿದ್ದರೆ, ಇಂಡಿಯಾ ಒಕ್ಕೂಟದ ಸ್ಥಾನ 182ಕ್ಕೆ ಕುಸಿಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ