ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಶಾರ್ಜಾದಿಂದ ಬಂದ ವಿಮಾನ ಲ್ಯಾಂಡ್ ಆದ ಬಳಿಕ ಚಲಿಸುತ್ತಿದ್ದಾಗಲೇ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ದ್ವಾರದಿಂದ ಜಿಗಿದಿದ್ದಾರೆ. ಪ್ರಯಾಣಿಕನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇಂದು ಬೆಳಗಿನ ಜಾವ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನದ ಬಾಗಿಲು ತೆಗೆದು ಚಲಿಸುತ್ತಿದ್ದ ವಿಮಾನದಿಂದ ಜಿಗಿದ ಆಘಾತಕಾರಿ ಘಟನೆಯೊಂದು ಚೆನ್ನೈ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ ನಡೆದಿದೆ. ಶಾರ್ಜಾದಿಂದ ಬಂದ ವಿಮಾನ ಚೆನ್ನೈನಲ್ಲಿ ಲ್ಯಾಂಡ್ ಆಗಿತ್ತು. ನಿಧಾನವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕ ಹೊರಗೆ ಜಿಗಿದಿದ್ದಾನೆ.
25
ಇತರೆ ಪ್ರಯಾಣಿಕರಲ್ಲಿ ಭಯ
ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಪ್ಲೇನ್ ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿತ್ತು ಅಂದ್ರೆ ಸಂಪೂರ್ಣವಾಗಿ ನಿಂತಾಗ ಈ ಘಟನೆ ನಡೆದಿದೆ. ಪ್ರಯಾಣಿಕನ ಈ ನಡೆಯಿಂದ ಇನ್ನುಳಿದ ಪ್ರಯಾಣಿಕರಲ್ಲಿ ಭಯವನ್ನುಂಟು ಮಾಡಿತ್ತು. ಕೂಡಲೇ ಭದ್ರತಾ ಸಿಬ್ಬಂದಿ ಕಾರ್ಯಪ್ರವೃತ್ತರಾದರು ಎಂದು ಹೇಳಿಕೆ ನೀಡಿದ್ದಾರೆ.
35
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ, ವ್ಯಕ್ತಿ ಹೊರಗೆ ಜಿಗಿದಾಗ ವಿಮಾನ ಇನ್ನೂ ನಿಧಾನವಾಗಿ ಚಲಿಸುತ್ತಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಾಗೆಯೇ ವಿಮಾನಕ್ಕೂ ಯಾವುದೇ ಹಾನಿಯಾಗಿಲ್ಲ. ಈ ಘಟನೆ ನಡೆದಾದ ವಿಮಾನ ಮೇನ್ ರನ್‌ವೇಯಿಂದ ಹೊರ ಬಂದಿತ್ತು ಎಂದು ಹೇಳಿದ್ದಾರೆ.
ಪ್ರಯಾಣದ ವೇಳೆ ಪ್ರಯಾಣಿಕ ಆರೋಗ್ಯದಲ್ಲಿ ಏರುಪೇರು ಆಗಿರಬಹುದು. ಘಟನೆಗೂ ಮುನ್ನ ಪ್ರಯಾಣಿಕನಿಗೆ ಪ್ರಯಾಣದ ವೇಳೆ ಎರಡು ಬಾರಿ ವಾಂತಿಯಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದರಿಂದಾಗಿ ಪ್ರಯಾಣಿಕ ಈ ರೀತಿಯಾಗಿ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಪ್ರಯಾಣಿಕ ಜಿಗಿಯುತ್ತಿದ್ದಂತೆ ಪೈಲಟ್ ಕೂಡಲೇ ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ.
55
ಪ್ರಯಾಣಿಕ ಪೊಲೀಸರ ವಶಕ್ಕೆ
ವಿಷಯ ತಿಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಪ್ರಯಾಣಿಕನನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಈ ಘಟನೆಯಿಂದ ಕೆಲ ಸಮಯ ವಿಮಾನಗಳ ಸಂಚಾರದಲ್ಲಿ ವ್ಯತ್ಯಯುಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ರನ್‌ವೇಯನ್ನು ಬೆಳಿಗ್ಗೆ 03:23 ರಿಂದ ಬೆಳಿಗ್ಗೆ 04:23 ರವರೆಗೆ ಮುಚ್ಚಲಾಯಿತು.
ಈ ವೇಳೆ 2ನೇ ರನ್‌ವೇ ಮೂಲಕ ವಿಮಾನಗಳ ಕಾರ್ಯಾಚರಣೆ ನಡೆಸಲಾಗಿತ್ತು. ವಿಮಾನಯಾನ ಸುರಕ್ಷತಾ ಶಿಷ್ಟಾಚಾರದ ಉಲ್ಲಂಘನೆಯ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಚೆನ್ನೈ ವಿಮಾನ ನಿಲ್ದಾಣದಿಂದ ಈ ಸಂಬಂಧ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ