ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

Published : Sep 24, 2025, 09:11 AM IST

Ayodhya mosque construction project: ಸುಪ್ರೀಂ ಕೋರ್ಟ್‌ ಆದೇಶದಂತೆ ಅಯೋಧ್ಯೆಯ ಧನ್ನೀಪುರ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾದ ಬೃಹತ್‌ ಮಸೀದಿ ಯೋಜನೆಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. .

PREV
14
ನಿರಾಕ್ಷೇಪಣಾ ಪತ್ರ

ಧ್ವಂಸಗೊಂಡ ಬಾಬ್ರಿ ಮಸೀದಿಗೆ ಪರಿಹಾರಾರ್ಥವಾಗಿ ಸುಪ್ರೀಂ ಕೋರ್ಟ್‌ ಆದೇಶದಂತೆ ಅಯೋಧ್ಯೆಯ ಧನ್ನೀಪುರ ಗ್ರಾಮದಲ್ಲಿ ಬೃಹತ್‌ ಮಸೀದಿ ನಿರ್ಮಿಸುವ ಯೋಜನೆಗೆ ವಿಘ್ನ ಎದುರಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡದ ಕಾರಣ, ಮಸೀದಿ ನಿರ್ಮಾಣ ಯೋಜನೆಗೆ ಅನುಮತಿ ನೀಡಲು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ನಿರಾಕರಿಸಿದೆ.

24
ಧನ್ನೀಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆ ಜಾಗ

ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದ ಇತ್ಯರ್ಥ ವೇಳೆ ಮಸೀದಿ ನಿರ್ಮಾಣಕ್ಕೆಂದೇ ಸುನ್ನಿ ವಕ್ಫ್‌ ಬೋರ್ಡ್‌ಗೆ 5 ಎಕ್ರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ.9, 2019ರಂದು ನಿರ್ದೇಶನ ನೀಡಿತ್ತು. ಅದರಂತೆ ಆ.3, 2020ರಂದು ಜಿಲ್ಲಾಧಿಕಾರಿ ಅನುಜ್‌ ಕುಮಾರ್‌ ಝಾ ಅವರು ಅಯೋಧ್ಯೆಯಿಂದ 25 ಕಿ.ಮೀ. ದೂರದ ಧನ್ನೀಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆಂದು ಜಾಗ ನೀಡಿದ್ದರು.

34
ಅರ್ಜಿ ತಿರಸ್ಕರಿಸಿದ ಎಡಿಎ

ಜೂ.23, 2021ರಲ್ಲಿ ಮಸೀದಿ, ಆಸ್ಪತ್ರೆ ನಿರ್ಮಾಣ ಸಂಬಂಧ ಟ್ರಸ್ಟ್‌ ಅರ್ಜಿ ಸಲ್ಲಿಸಿದ್ದು, ಆ ಅರ್ಜಿಯನ್ನು ಸೆ.16ರಂದು ಎಡಿಎ ತಿರಸ್ಕರಿಸಿದೆ. ಲೋಕೋಪಯೋಗಿ ಇಲಾಖೆ, ಪರಿಸರ ನಿಯಂತ್ರಣ ಹಾಗೂ ನಾಗರಿಕ ವಿಮಾನಯಾನ, ನೀರಾವರಿ, ಕಂದಾಯ ಇಲಾಖೆ, ಮುನ್ಸಿಪಲ್‌ ಕಾರ್ಪೊರೇಷನ್‌, ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್‌ಗೆ ಬರೆದ ಪತ್ರದಲ್ಲಿ ಎಡಿಎ ತಿಳಿಸಿದೆ.

ಇದನ್ನೂ ಓದಿ: ಅಯೋಧ್ಯೆ ಮಂಡಲ ಪೂಜೆ ಮುಗಿಸಿ ಉಡುಪಿಗೆ ಬಂದ ಪೇಜಾವರ ಶ್ರೀಗಳು; ಆಂಜನೇಯ ಬಂದಂತಾಯ್ತು ಎಂದ ಪುತ್ತಿಗೆ ಶ್ರೀಗಳು!

44
ಮಸೀದಿ ಟ್ರಸ್ಟ್‌ನ ಕಾರ್ಯದರ್ಶಿ ಅತಾರ್‌ ಹುಸೇನ್‌

ಈ ಕುರಿತು ಪ್ರತಿಕ್ರಿಯಿಸಿರುವ ಮಸೀದಿ ಟ್ರಸ್ಟ್‌ನ ಕಾರ್ಯದರ್ಶಿ ಅತಾರ್‌ ಹುಸೇನ್‌ ಅವರು, ‘ಸುಪ್ರೀಂ ಕೋರ್ಟ್‌ ಮಸೀದಿ ನಿರ್ಮಾಣಕ್ಕೆ ಜಾಗ ಕೊಡಿಸಿದೆ. ಇದೀಗ ಸರ್ಕಾರ ಯಾವ ಕಾರಣಕ್ಕೆ ನಿರಕ್ಷೇಪಣಾ ಪತ್ರ ನೀಡಿಲ್ಲ, ಮಸೀದಿ ನಿರ್ಮಾಣ ಯೋಜನೆಯನ್ನು ಯಾಕೆ ಪ್ರಾಧಿಕಾರ ತಿರಸ್ಕರಿಸಿದೆ ಎಂಬುದು ತಿಳಿಯುತ್ತಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಊರಿಗೆ ಅರಸನಾದರೂ ತಾಯಿಗೆ ಮಗ: ಆಸ್ಪತ್ರೆಗೆ ದಾಖಲಾದ ಅಮ್ಮನ ಆರೋಗ್ಯ ವಿಚಾರಿಸಿದ ಯೋಗಿ ಆದಿತ್ಯನಾಥ್

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories