ಶೇ.80 ರಷ್ಟು ಭಾರತೀಯರಿಗೆ ಮೋದಿಯೇ ಅಚ್ಚು ಮೆಚ್ಚು, 3ನೇ ಬಾರಿಗೆ ಪ್ರಧಾನಿಯಾಗಲು ಬೆಂಬಲ!

Published : Aug 30, 2023, 02:40 PM IST

ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರಬಾಕಿ. ಇದರ ಬೆನ್ನಲ್ಲೇ  ಹಲವು ಸಂಸ್ಥೆಗಳು ಸಮೀಕ್ಷಾ ವರದಿಗಳನ್ನು ಬಿಡುಗಡೆ ಮಾಡುತ್ತಿದೆ.  ಇದೀಗ Pew ಸಂಶೋಧನಾ ಸಂಸ್ಥೆ ಪ್ರಕಟಿಸಿದ ಅಧ್ಯಯನ ವರದಿಯಲ್ಲಿ ಶೇಕಡಾ 80 ರಷ್ಟು ಭಾರತೀಯರು ಪ್ರಧಾನಿ ಮೋದಿಯೇ ಅಚ್ಚು ಮೆಚ್ಚು ಎಂದಿದ್ದಾರೆ.  3ನೇ ಬಾರಿ ಪ್ರಧಾನಿ  ಪಟ್ಟಅಲಂಕರಿಸಲು  ಮೋದಿಗೆ ಬೆಂಬಲಿಸಿದ್ದಾರೆ.  

PREV
17
ಶೇ.80 ರಷ್ಟು ಭಾರತೀಯರಿಗೆ ಮೋದಿಯೇ ಅಚ್ಚು ಮೆಚ್ಚು, 3ನೇ ಬಾರಿಗೆ ಪ್ರಧಾನಿಯಾಗಲು ಬೆಂಬಲ!

Pew ಸಂಶೋಧನಾ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಶೇಕಡಾ 80 ರಷ್ಟು ಭಾರತೀಯರು ಪ್ರಧಾನಿ ಮೋದಿ ಪರ ಒಲವು ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ಜಾಗತಿಕ ಮಟ್ಟದಲ್ಲಿ ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

27

Pew ಸರ್ವೇ ತಂಡ ಭಾರತ ಹಾಗೂ  23 ದೇಶಗಳಲ್ಲಿ ಓಟ್ಟು 30,800 ವಯಸ್ಕರ ಅಭಿಪ್ರಾಯ ಕೇಳಿ ಸಮೀಕ್ಷಾ ವರದಿ ಸಂಗ್ರಹಿಸಿದೆ. ಈ ಪೈಕಿ ಶೇಕಡಾ 80 ರಷ್ಟು ಮಂದಿ ಜಾಗತಿಕ ಮಟ್ಟದಲ್ಲಿ ಭಾರತದ ಚರಿಷ್ಮಾ ಬದಲಿಸಿದ  ಮೋದಿ ಪರ ಒಲವು ವ್ಯಕ್ತಪಡಿಸಿದ್ದಾರೆ

37

ಶೇಕಡಾ 55 ರಷ್ಟು ಮಂದಿ 2014ರಿಂದ ಭಾರತ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ ಎಂದಿದ್ದಾರೆ. ಮೋದಿ ಆಡಳಿತದಲ್ಲಿ ನವ ಭಾರತವಾಗಿ ರೂಪುಗೊಂಡಿದೆ. ಮೋದಿ ಆಡಳಿತ ಉತ್ತಮ ಎಂದಿದ್ದಾರೆ.

47

ಶೇಕಡಾ 55ರಷ್ಟು ಮಂದಿ 2024ರ ಲೋಕಸಭಾ ಚುನಾವಣೆಯಲ್ಲಿ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲು ಒಲವು ವ್ಯಕ್ತಪಡಿಸಿದ್ದಾರೆ. ಮೋದಿಯೇ ಸೂಕ್ತ ಪ್ರಧಾನಿ ಎಂದು ಅಭಿಪ್ರಾಯಪಟ್ಟಿದ್ದಾರೆ.

57

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10 ರಂದು ನಡೆಯಲಿರುವ ಜಿ20 ಶೃಂಗಸಭೆಗೂ ಒಂದು ವಾರ ಮುನ್ನ ಈ ಅಂಕಿ ಅಂಶ ಬಹಿರಂಗಗೊಂಡಿದೆ. ಇದರೊಂದಿಗೆ ಮೋದಿ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ.
 

67

ಈ ಸಮೀಕ್ಷೆಯಲ್ಲಿ ಕೇವಲ ಭಾರತ ಮಾತ್ರವಲ್ಲ, ಇತರ 23 ದೇಶಗಳ ಜನರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಪ್ರಧಾನಿ ಮೋದಿ ಕಡೆಗಿರುವ ಒಲವಿನ ಪ್ರಮಾಣ ದುಪ್ಪಟ್ಟಾಗಿದೆ.

77

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್ ಬಳಿಕ ಭಾರತ ಜಾಗತಿಕ ಮಟ್ಟದಲ್ಲಿ ವಿಶ್ವಗುರು ಅನ್ನೋ ಮಾತುಗಳು ಕೇಳಿಬರುತ್ತಿದೆ.  ಇದರ ಜೊತೆಗೆ ಸಮೀಕ್ಷಾ ವರದಿಯೂ ಬಿಡುಗಡೆಯಾಗಿದೆ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories