international yoga day 2026: ಇದೇ ಮೊದಲ ಬಾರಿಗೆ ಕೊಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಪ್ರಧಾನಿ ಮೋದಿ ಭಾಗಿ!

Published : Jun 21, 2026, 07:26 AM IST

Internation Yoga day 2026: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು.  

PREV
13
ಕೊಲ್ಕತ್ತಾದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಯೋಗ ದಿನಾಚರಣೆ

ಪ್ರಧಾನಿ ನರೇಂದ್ರ ಮೋದಿ(Prime minister Narendra Modi) ಭಾನುವಾರ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದು ವಿಶೇಷ,  ವೆಲ್‌ನೆಸ್, ಆರೋಗ್ಯಕರ ಜೀವನಕ್ಕಾಗಿ ಯೋಗ ಕೇಂದ್ರೀಕರಿಸಿದ ಜಾಗತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಜೀವನದಲ್ಲಿ ಎಲ್ಲ ಹಂತಗಳಲ್ಲೂ ಆರೋಗ್ಯಕರವಾಗಿರಲು ಯೋಗದ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಈ ಬಾರಿ 'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ವಿಷಯದ ಅಡಿಯಲ್ಲಿ ಭಾನುವಾರ ದೇಶಾದ್ಯಂತ ಅಷ್ಟೇ ಅಲ್ಲದೆ ವಿಶ್ವಾದ್ಯಂತ 12 ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ.

23
ಆರೋಗ್ಯಕರ ವೃದ್ಹಾಪ್ಯಕ್ಕಾಗಿ ಯೋಗ

Internation Yoga day 2026: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದರು. ಹೊಸ ಹುಮ್ಮಸ್ಸಿನೊಂದಿಗೆ ಸುಮಾರು 1 ಮಿಲಿಯನ್ ಜನರು ಭಾಗವಹಿಸಿದ್ದ ಈ ಯೋಗದಿನದ ಕಾರ್ಯಕ್ರಮದಲ್ಲಿ ಭಾಗಿಯಾದರು.

33
ಇದೇ ಮೊದಲ ಬಾರಿಗೆ ಕೊಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮ

ಅಂತರರಾಷ್ಟ್ರೀಯ ಯೋಗ ದಿನದ ಮುಖ್ಯ ಕಾರ್ಯಕ್ರಮವನ್ನು ಕೋಲ್ಕತ್ತಾದಲ್ಲಿ ನಡೆಸುತ್ತಿರುವುದು ಇದೇ ಮೊದಲು ಆಯುಷ್ ಸಚಿವಾಲಯ ಕಾರ್ಯದರ್ಶಿ ವೈದ್ಯ ರಾಜೇಶ್ ಕೋಟೆಚಾ ಹೇಳಿದರು. ಕೋಲ್ಕತ್ತಾದಾದ್ಯಂತ ಪ್ರಧಾನಿ ಮೋದಿ ಅವರೊಂದಿಗೆ ಸುಮಾರು 1 ಮಿಲಿಯನ್ ಜನರು ಯೋಗ ಪ್ರದರ್ಶನದಲ್ಲಿ ಭಾಗಿಯಾದರು. ಸುಮಾರು 700,000 ಜನರು ಸರ್ಕಾರಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories