ಅಲ್ಲದೆ, ಕೊಮೊರೊಸ್, ಟರ್ಕಿ, ಯುಎಇ, ದಕ್ಷಿಣ ಕೊರಿಯಾ, ಇಯು / ಇಸಿ, ಬ್ರೆಜಿಲ್ ಮತ್ತು ನೈಜೀರಿಯಾದೊಂದಿಗೆ ದ್ವಿಪಕ್ಷೀಯ ಸಭೆಗಳ ಜೊತೆಗೆ ಕೆನಡಾದ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸುತ್ತಾರೆ ಎಂದೂ ತಿಳಿದುಬಂದಿದೆ. ಒಟ್ಟಾರೆ, ಜಿ20 ಶೃಂಗಸಭೆಯಲ್ಲಿ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ಅತಿಥಿ ರಾಷ್ಟ್ರಗಳು ಹಾಗೂ 14 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ ಎಂದೂ ವರದಿಯಾಗಿದೆ.