ಪ್ರಧಾನಿ ಮೋದಿ ಅನಾವರಣ ಮಾಡಲಿರುವ ದಿಯೋಘರ್‌ ವಿಮಾನ ನಿಲ್ದಾಣದ ನೋಟ!

Published : Jul 09, 2022, 01:11 PM IST

ನವದೆಹಲಿ (ಜುಲೈ 9): ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 12 ರಂದು ಜಾರ್ಖಂಡ್‌ನ ದಿಯೋಘರ್ ಮತ್ತು ಬಿಹಾರದ ಪಾಟ್ನಾಗೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಶನಿವಾರ ಖಚಿತಪಡಿಸಿದೆ. ಅವರು ದಿಯೋಘರ್‌ನಲ್ಲಿ 16,000 ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಅವರು ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.

PREV
15
ಪ್ರಧಾನಿ ಮೋದಿ ಅನಾವರಣ ಮಾಡಲಿರುವ ದಿಯೋಘರ್‌ ವಿಮಾನ ನಿಲ್ದಾಣದ ನೋಟ!
Deoghar AirPort

ದೇಶಾದ್ಯಂತದ ಭಕ್ತರಿಗೆ ಪ್ರಮುಖ ಧಾರ್ಮಿಕ ತಾಣವಾಗಿರುವ ಬಾಬಾ ಬೈದ್ಯನಾಥ ಧಾಮಕ್ಕೆ ನೇರ ಸಂಪರ್ಕವನ್ನು ಒದಗಿಸುವ ಪ್ರಮುಖ ಹಂತವಾಗಿ ದಿಯೋಘರ್ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಪಿಎಂಒ ಪ್ರಕಟಿಸಿದೆ.
 

25
Deoghar AirPort

ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ವಾರ್ಷಿಕವಾಗಿ ಐದು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ನಿಭಾಯಿಸಲು ಸಜ್ಜಾಗಿದೆ.

35
Deoghar AirPort

ಜಾರ್ಖಂಡ್‌ನಲ್ಲಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ ನಂತರ, ಪ್ರಧಾನಿ ಬಿಹಾರಕ್ಕೆ ತೆರಳಲಿದ್ದು, ಅಲ್ಲಿ ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

45
Baba Baidyanath temple

ಬಿಹಾರ ವಿಧಾನಸಭೆಯ 100 ವರ್ಷಗಳ ನೆನಪಿಗಾಗಿ ನಿರ್ಮಿಸಲಾದ ಶತಾಬ್ದಿ ಸ್ಮೃತಿ ಸ್ತಂಭವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಪಿಎಂಒ ಹೇಳಿದೆ. ವಿಧಾನಸೌಧದ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮ್ಯೂಸಿಯಂನಲ್ಲಿರುವ ವಿವಿಧ ಗ್ಯಾಲರಿಗಳು ಬಿಹಾರದ ಪ್ರಜಾಪ್ರಭುತ್ವದ ಇತಿಹಾಸ ಮತ್ತು ಪ್ರಸ್ತುತ ನಾಗರಿಕ ರಚನೆಯ ವಿಕಾಸವನ್ನು ಪ್ರದರ್ಶಿಸುತ್ತವೆ.

55
Baba Baidyanath temple

ಇದು 250 ಕ್ಕೂ ಹೆಚ್ಚು ವ್ಯಕ್ತಿಗಳ ಸಾಮರ್ಥ್ಯದ ಕಾನ್ಫರೆನ್ಸ್ ಹಾಲ್ ಅನ್ನು ಸಹ ಹೊಂದಿರುತ್ತದೆ. ಈ ಸಂದರ್ಭದಲ್ಲಿ ವಿಧಾನಸೌಧದ ಅತಿಥಿ ಗೃಹದ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ.

Read more Photos on
click me!

Recommended Stories