2024-25ನೇ ಸಾಲಿಗೆ 84.37 ಲಕ್ಷ ಮನೆಗಳ ಗುರಿಗಳ ಪೈಕಿ ಇಲ್ಲಿಯವರೆಗೆ 39.82 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಖಾತೆ ರಾಜ್ಯ ಸಚಿವ ಚಂದ್ರಶೇಖರ್ ಬೆಮ್ಮಸಾನಿ ಉತ್ತರಿಸಿದರು. ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ 2024-25ರಲ್ಲಿ 84,37,139 ಮನೆಗಳನ್ನು ನಿರ್ಮಿಸುವ ಗುರಿಯನ್ನು ಸಚಿವಾಲಯ ಹೊಂದಿದೆ.