ರಾಣಿ ಎಲಿಜಬೆತ್ II ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಸಂಜೆ ಲಂಡನ್‌ಗೆ ತೆರಳಿದ್ದಾರೆ. ಸೆಪ್ಟೆಂಬರ್ 8 ರಂದು ಸ್ಕಾಟ್ಲೆಂಡ್‌ನ ಬಾಲ್ಮೋರಲ್ ಕ್ಯಾಸಲ್‌ನ (Balmoral Castle) ಬೇಸಿಗೆ ನಿವಾಸದಲ್ಲಿ 96 ನೇ ವಯಸ್ಸಿನಲ್ಲಿ ನಿಧನರಾದ ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 19 ರ ಬೆಳಗ್ಗೆ ವೆಸ್ಟ್‌ಮಿನ್‌ಸ್ಟರ್ ಅಬೆಯಲ್ಲಿ ನಡೆಯಲಿದೆ. ಸದ್ಯ, ಅವರ ಮೃತದೇಹ ವೆಸ್ಟ್‌ಮಿನ್‌ಸ್ಟರ್ ಹಾಲ್‌ನಲ್ಲಿದೆ. ಇನ್ನು, ರಾಷ್ಟ್ರಪತಿ ದ್ರೌಪದಿ ಮುರ್ಮು ಯುಕೆಗೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.