ರಾಯ್‌ಬರೇಲಿ ಉಳಿಸಿಕೊಳ್ಳಲು ಮುಂದಾದ ರಾಹುಲ್ ಗಾಂಧಿ? ವಯನಾಡು ಕ್ಷೇತ್ರದ 'ಕೈ' ಅಭ್ಯರ್ಥಿ ಇವರೇನಾ?

First Published Jun 8, 2024, 3:51 PM IST

ವಯನಾಡು ಮತ್ತು ರಾಯ್‌ಬರೇಲಿಯಿಂದ ಗೆದ್ದಿರೋ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳುತ್ತಾರೆ?

2019ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ವಯನಾಡು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಕೈಯನ್ನು ವಯನಾಡಿನ ಜನತೆ ಹಿಡಿದಿದ್ದರು.

ಹಾಗಾಗಿ ಈ ಬಾರಿಯೂ ವಯನಾಡು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. ಆದ್ರೆ ತಾಯಿ ಸೋನಿಯಾ ಗಾಂಧಿ ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಣೆಯಲ್ಲಿ ತೆರವಾದ ಕ್ಷೇತ್ರಕ್ಕೂ ಅಂತಿಮ ಕ್ಷಣದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಿ ಗೆಲುವು ದಾಖಲಿಸಿದ್ದಾರೆ.

Latest Videos


Rahul Gandhi

ಆರಂಭದಲ್ಲಿ ರಾಯ್‌ಬರೇಲಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಹೆಸರು ಕೇಳಿ ಬಂದಿತ್ತು.  ಆದರೆ ಕೊನೆ ಕ್ಷಣದಲ್ಲಿ ಸೋನಿಯಾ ಗಾಂಧಿ ಪುತ್ರನನ್ನೇ ತಮ್ಮ ಕ್ಷೇತ್ರಕ್ಕೆ ಕರೆ ತಂದಿದ್ದರು. ಮಗನನ್ನು ನಿಮ್ಮ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಸೋನಿಯಾ ಗಾಂಧಿ ಭಾವನಾತ್ಮಕ ಮಾತುಗನ್ನಾಡಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್‌ಬರೇಲಿ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ವಾರ ಎರಡು ಕ್ಷೇತ್ರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಪ್ರವಾಸದ ವೇಳೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜೊತೆಯಲ್ಲಿರಲಿದ್ದಾರೆ.

ಇದೀಗ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಮುಂದಾಗಿರುವ ರಾಹುಲ್ ಗಾಂಧಿ, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಗುತ್ತದೆ. ರಾಹುಲ್ ಗಾಂಧಿ ರಾಜೀನಾಮೆಯ ನಂತರ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತದೆ. ಹಾಗಾದ್ರೆ ಯಾರು  ವಯನಾಡು ಕ್ಷೇತ್ರದ ಅಭ್ಯರ್ಥಿ ಯಾರಾಗ್ತಾರೆ ಅನ್ನೋ ಚರ್ಚೆ ಶುರುವಾಗಿವೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಹೆಸರು ವಯನಾಡು ಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಪ್ರಿಯಾಂಕಾ ಗಾಂಧಿ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿಲ್ಲ. ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿ ಅನ್ನೋದು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಾಗಿದೆ ಎನ್ನಲಾಗಿದೆ.

2019ರ ಚುನಾವಣೆಯಲ್ಲಿ ವಾರಣಾಸಿಯಿಂದ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಆದ್ರೆ ಪ್ರಿಯಾಂಕಾ ಗಾಂಧಿ ಚುನಾವಣೆ ರಾಜಕೀಯ ಬೇಡ ಎಂದು ಹಿಂದೆ ಸರಿದಿದ್ದರು.

click me!