ಎನ್‌ಸಿಪಿ (ಎಸ್‌ಪಿ) ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಅವರ ಪುತ್ರಿ ರೇವತಿ ಸುಳೆ, ನಾಗ್ಪುರ ಮೂಲದ ಉದ್ಯಮಿಯ ಪುತ್ರ ಸಾರಂಗ್ ಲಖಾನಿ ಅವರನ್ನು ವಿವಾಹವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
210
ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಸ್ಮೃತಿ ಶಿಂಧೆ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಈ ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
310
ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಪುತ್ರ ವಿಜಯ್ ಸುಳೆ ಮಂಗಳವಾರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ರೇವತಿ ಮತ್ತು ಸಾರಂಗ್ ಫೋಟೋ ಜೊತೆ "ಅಕ್ಕ ಮತ್ತು ಭಾವನಿಗೆ ಅಭಿನಂದನೆಗಳು" ಎಂಬ ಶೀರ್ಷಿಕೆಯೊಂದಿಗೆ ಹೃದಯ ಮತ್ತು ಉಂಗುರದ ಎಮೋಜಿ ಹಂಚಿಕೊಂಡಿದ್ದಾರೆ.
ರೇವತಿ ಸುಳೆ ಮುಂಬೈನ ಸೇಂಟ್ ಕ್ಸೇವಿಯರ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದು, ನಂತರ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ.
510
ರೇವತಿ ಸುಳೆ ಅವರು ನಾಗಪುರದ ಪ್ರಸಿದ್ಧ ಕೈಗಾರಿಕೋದ್ಯಮಿ ಅರುಣ್ ಲಖಾನಿ ಅವರ ಪುತ್ರ ಸಾರಂಗ್ ಲಖಾನಿ ಅವರನ್ನು ವಿವಾಹವಾಗುತ್ತಿದ್ದಾರೆ. ಸಾರಂಗ್ ಅವರು ನಾಗಪುರದ ಪ್ರತಿಷ್ಠಿತ 'ವಿಶ್ವರಾಜ್ ಗ್ರೂಪ್' ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.
610
ಸಾರಂಗ್ ಲಖಾನಿ ಪ್ರಸ್ತುತ ತಮ್ಮ ತಂದೆಯ ನಿಯಂತ್ರಣದಲ್ಲಿರುವ ವಿಶ್ವರಾಜ್ ಗ್ರೂಪ್‌ನಲ್ಲಿ ಪ್ರಮುಖ ವ್ಯವಹಾರ ನೋಡಿಕೊಳ್ಳುತ್ತಿದ್ದು, ಬ್ಯಾಡ್ಮಿಂಟನ್ ಆಟಗಾರರಾಗಿರುವ ಅವರು ಯುನೈಟೆಡ್ ಸ್ಟೇಟ್ಸ್‌ನ ಕೊಲಂಬಿಯಾ ಬಿಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೇಜ್‌ಮೆಂಟ್ ಅಧ್ಯಯನ ಮಾಡಿದ್ದಾರೆ.
710
ರೇವತಿ ಸುಳೆ, ಸುಪ್ರಿಯಾ ಸುಳೆ ಹಾಗೂ ಸದಾನಂದ್ ಸುಳೆ ದಂಪತಿಗಳ ಪುತ್ರಿ. ಇವರಿಗೆ ಮಗ ಕೂಡ ಇದ್ದು, ಆತನ ಹೆಸರು ವಿಜಯ್ ಸುಳೆ.
810
ಎದೆ ಸೋಂಕಿನಿಂದಾಗಿ ಸುಪ್ರಿಯಾ ಸುಳೆ ಅವರ ತಂದೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಸೋಮವಾರ ಪುಣೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
910
ಕುಟುಂಬಗಳು ಇನ್ನೂ ಮದುವೆ ದಿನಾಂಕಗಳನ್ನು ಹಂಚಿಕೊಂಡಿಲ್ಲವಾದರೂ, ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಹಿರಿಯ ನಾಯಕರು ಮದುವೆಯನ್ನು ಫಿಕ್ಸ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನುವ ವರದಿಗಳಿವೆ.
1010
ಇನ್ನು ಸಾರಂಗ್ ಲಖಾನಿ 2014 ರಲ್ಲಿ ನಾಗ್ಪುರ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿಯನ್ನು ಪೂರ್ಣಗೊಳಿಸಿದ ಬಳಿಕ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿಗಳು), ಮೂಲಸೌಕರ್ಯ ಮತ್ತು ನಿಯಂತ್ರಣದಲ್ಲಿ ಕಾರ್ಯನಿರ್ವಾಹಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಂಗ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ