ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಿಂದ 100 ಕೋಟಿ ರೂ.ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ನಾಯಕ ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ. ಈ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ, ಜಗನ್ ನಿವಾಸಕ್ಕೆ ಕಳುಹಿಸಲಾಗಿದೆ ಎಂದು ದೂರಿದ್ದಾರೆ.
ತಿರುಪತಿ ದೇವಸ್ಥಾನದಿಂದ 100 ಕೋಟಿ ರೂಪಾಯಿಗೂ ಅಧಿಕ ಹಣ ಕಳ್ಳತನ
ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ 100 ಕೋಟಿ ರೂಪಾಯಿಗೂ ಅಧಿಕ ಹಣ ಕಳ್ಳತನ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ಆಂಧ್ರ ಪ್ರದೇಶದ ಬಿಜೆಪಿ ನಾಯಕ ಗಂಭೀರ ಆರೋಪವನ್ನು ಮಾಡಿದ್ದಾರೆ.
27
ಸಿಟಿವಿ ದೃಶ್ಯಾವಳಿ
ಆಂಧ್ರ ಪ್ರದೇಶದ ಬಿಜೆಪಿ ನಾಯಕ ಮತ್ತು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ದೇವಸ್ಥಾನದ ಉದ್ಯೋಗಿ ರವಿಕುಮಾರ್ ಎಂಬವರು ಹುಂಡಿಯಿಂದ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸಿಸಿಟಿವಿ ದೃಶ್ಯಾವಳಿಯೊಂದನ್ನು ಸಹ ಬಿಡುಗಡೆ ಮಾಡಿದ್ದಾರೆ
37
ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ
ತಿರುಪತಿ ದೇವಸ್ಥಾನದ ಹುಂಡಿಯಿಂದ ಕಳ್ಳತನ ಮಾಡಲಾದ ಕೋಟ್ಯಂತರ ರೂಪಾಯಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ. ಕಳ್ಳತನ ಮಾಡಲಾದ ಹಣವನ್ನು ಜಗನ್ ಮೋಹನ್ ರೆಡ್ಡಿ ಅವರ ನಿವಾಸವಾದ ತಾಡೇಪಲ್ಲಿಯ ಪ್ಯಾಲೇಸ್‌ಗೆ ಕಳುಹಿಸಾಲಾಗಿದೆ ಎಂದು ಭಾನು ಪ್ರಕಾಶ್ ರೆಡ್ಡಿ ಆರೋಪ ಮಾಡಿದ್ದಾರೆ.
2019 ಮತ್ತು 2024 ರ ನಡುವೆ ವೈಎಸ್‌ಆರ್‌ಸಿಪಿ ಆಳ್ವಿಕೆಯಲ್ಲಿ ನಡೆದ ಅತಿದೊಡ್ಡ ಕಳ್ಳತನವಾಗಿದೆ. 100 ಕೋಟಿ ರೂಪಾಯಿ ಕಳ್ಳತನ ಟಿಟಿಡಿ ಇತಿಹಾಸದಲ್ಲಿ ನಡೆದ ಅತಿದೊಡ್ಡ ದರೋಡೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರ ಪಕ್ಷ ಟಿಡಿಪಿಯ ನಾಯಕ ನಾರಾ ಲೋಕೇಶ್ ಎಂಬವರು ಕಾಣಿಕೆ ಹುಂಡಿ ಲೂಟಿ ಮಾಡುವ ದೃಶ್ಯಾವಳಿಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
57
ನಾರಾ ಲೋಕೇಶ್
ಈ ಕುರಿತು ಪ್ರತಿಕ್ರಿಯಿಸಿರುವ ನಾರಾ ಲೋಕೇಶ್, ಹೈಕೋರ್ಟ್ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಹ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಲೋಕ್ ಅದಲಾತ್‌ನಲ್ಲಿ ಈ ಪ್ರಕರಣವನ್ನು ಇತ್ಯರ್ಥಪಡಿಸಲಾಗಿತ್ತು. ಇದರಲ್ಲಿ ವೈಎಸ್‌ಆರ್‌ಸಿಪಿ ನಾಯಕರು ಮತ್ತು ಉನ್ನತ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಬಿಜೆಪಿಯ ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಅತ್ಯಂತ ಪ್ರಾಮಾಣಿಕತನದಿಂದ ಪೊಲೀಸ್ ಅಧಿಕಾರಿಯೊಬ್ಬರು ದೇವಸ್ಥಾನ ಲೂಟಿ ಹೊಡೆಯುವ ಕೆಲಸವನ್ನು ಮಾಡುತ್ತಿದ್ದರು. ಅಧಿಕಾರಿಗಳು, ಪೊಲೀಸರು ಮತ್ತು ರಾಜಕೀಯ ನಾಯಕರು ಲೂಟಿ ಹೊಡೆದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ಕರುಣಾಕರ್ ರೆಡ್ಡಿ ಟಿಟಿಡಿಯ ಅಧ್ಯಕ್ಷರಾಗಿದ್ದರು ಎಂದು ಹೇಳಿದ್ದರು.