ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೋದರ ಪ್ರತೀಕ್ ಯಾದವ್ ನಿಗೂಢ ಸಾವು

Published : May 13, 2026, 08:01 AM IST

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಸೋದರ, 38 ವರ್ಷದ ಪ್ರತೀಕ್ ಯಾದವ್ ಲಕ್ನೋದಲ್ಲಿ ನಿಧನರಾಗಿದ್ದಾರೆ. ಫಿಟ್‌ನೆಸ್ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆಯಿದೆ.

PREV
14

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸೋದರ ಪ್ರತೀಕ್ ಯಾದವ್ ನಿಧನರಾಗಿದ್ದಾರೆ. ಪ್ರತೀಕ್ ಯಾದವ್ ಅವರಿಗೆ 38 ವರ್ಷ ವಯಸ್ಸು ಆಗಿತ್ತು. ಲಕ್ನೋ ನಗರದ ಸಿವಿಲ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ನಿಧನರಾಗಿದ್ದಾರೆ.

24

ಅಖಿಲೇಶ್ ಯಾದವ್ ತಂದೆ ಮುಲಾಯಂ ಸಿಂಗ್ ಅವರಿಗೆ ಇಬ್ಬರು ಪತ್ನಿಯರು. ಇಬ್ಬರಲ್ಲಿ ಸಾಧನಾ ಅವರ ಮಗನೇ ಪ್ರತೀಕ್. ಅಖಿಲೇಶ್ ಯಾದವ್ ಅವರಂತೆ ಪ್ರತೀಕ್ ಯಾದವ್ ರಾಜಕೀಯದಲ್ಲಿ ಸಕ್ರಿಯವಾಗಿರಲಿಲ್ಲ. ಪ್ರತೀಕ್ ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.

34

ಇಂದು ಬೆಳಗ್ಗೆ ಸುಮಾರು 6.15ಕ್ಕೆ ಪ್ರತೀಕ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಪ್ರತೀಕ್ ಯಾದವ್ ನಿಧನರಾಗಿರೋದನ್ನು ಘೋಷಿಸಿದ್ದಾರೆ. ಆದ್ರೆ ಪ್ರತೀಕ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರತೀಕ್ ದೇಹದ ಮೇಲೆ ಯಾವುದೇ ರೀತಿಯ ಗಾಯಗಳು ಇರಲಿಲ್ಲ ಎಂದು ಹೇಳಲಾಗುತ್ತಿದೆ.

44

ಪ್ರತೀಕ್ ಜಿಮ್ ಮತ್ತು ಫಿಟ್‌ನೆಸ್ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದರು. ಆಸ್ಪತ್ರೆಗೆ ಬಂದಾಗ ಪ್ರತೀಕ್ ಯಾದವ್ ಅವರ ಪತ್ನಿ ಇರಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತೀಕ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ಯಾದವ್ ಕುಟುಂಬಸ್ಥರು ದೌಡಾಯಿಸುತ್ತಿದ್ದು, ಮರಣೋತ್ತರ ಶವ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories