ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಜನರನ್ನು ಬೇರ್ಪಡಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ನಾಡಗೀತೆಗೆ ಆದ್ಯತೆ ನೀಡದಿರುವುದರ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ವಿರೋಧ ಪಕ್ಷದ ನಾಯಕ, ಡಿಎಂಕೆ ಶಾಸಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ನಿರ್ಮೂಲನೆ ಆಗಬೇಕು ಎಂಬ ಹೇಳಿಕೆಯನ್ನು ಪುನಾರ್ವತಿಸಿದ್ದಾರೆ. ಜನರನ್ನು ಬೇರ್ಪಡಿಸುವ ಸನಾತನ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
25
ತಮಿಳುನಾಡಿನ ಅಭಿವೃದ್ಧಿ
ಆಡಳಿತ ಸರ್ಕಾರ ಮತ್ತು ವಿರೋಧ ಪಕ್ಷದವರಾದ ನಾವು ಸದನದಲ್ಲಿ ಪ್ರತ್ಯೇಕವಾಗಿ ಕುಳಿತಿರಬಹುದು. ಆದ್ರೆ ತಮಿಳುನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದರು. ಹಾಗೆಯೇ ನೂತನ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ನಮ್ಮ ಪಕ್ಷದ ನಾಯಕರು ಶುಭಾಶಯಗಳನ್ನು ತಿಳಿಸಿದರು. ಈ ಸ್ನೇಹಮಯ ರಾಜಕೀಯ ಸಂಸ್ಕೃತಿ (Political Civility) ಹೀಗೆಯೇ ಮುಂದುವರಿಯಲಿ ಎಂದರು.
35
ನಾಡಗೀತೆ ಮತ್ತು ವಂದೇ ಮಾತರಂ
ಇದೇ ವೇಳೆ ಸಿಎಂ ಪ್ರಮಾಣವಚನದ ವೇಳೆ ವಂದೇ ಮಾತರಂ, ರಾಷ್ಟ್ರಗೀತೆ ಬಳಿಕ ತಮಿಳುನಾಡಿನ ನಾಡಗೀತೆ ಹಾಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಶ್ಚಿಮ ಬಂಗಾಳ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ವಂದೇ ಮಾತರಂ ಹಾಡಲಿಲ್ಲ. ಆದ್ರೆ ನಮ್ಮಲ್ಲಿ ಮಾತ್ರ ವಂದೇ ಮಾತರಂ ಹಾಡಲಾಯ್ತು. ನಮ್ಮ ರಾಜ್ಯಪಾಲರು ಯಾರು ಎಂಬುವುದು ಎಲ್ಲರಿಗೂ ತಿಳಿದಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ಮುಖ್ಯಮಂತ್ರಿಗಳು ಮತ್ತು ನಾನು ಒಂದೇ ಕಾಲೇಜಿನಲ್ಲಿ ಓದಿದ್ದೇವೆ. ನಾವು ನಮ್ಮ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುತ್ತವೆ. ಹಾಗಾಗಿ ಮುಖ್ಯಮಂತ್ರಿಗಳು ನಮ್ಮ ಸಲಹೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಎಂದಿಗೂ ನಮ್ಮ ರಾಜ್ಯದ ನಾಡಗೀತೆಯನ್ನು ಎರಡನೇ ಸ್ಥಾನಕ್ಕೆ ತಳ್ಳದಂತೆ ನೋಡಿಕೊಳ್ಳಬೇಕು ಎಂದರು.
55
ವಿರೋಧ ಪಕ್ಷದ ನಾಯಕರಾಗಿರುವ ಉದಯನಿಧಿ ಸ್ಟಾಲಿನ್
ಸೋಮವಾರ ಡಿಎಂಕೆ ನಾಯಕ, ಮಾಜಿ ಸಿಎಂ ಸ್ಟಾಲಿನ್ ನಿವಾಸಕ್ಕೆ ನೂತನ ಸಿಎಂ ವಿಜಯ್ ತೆರಳಿದ್ದರು. ವಿಜಯ್ ಅವರ ಈ ಭೇಟಿಯನ್ನು ಉದಯನಿಧಿ political civility ಎಂದು ಉಲ್ಲೇಖಿಸಿದರು. ಸೋಮವಾರ ಉದಯನಿಧಿ ಸ್ಟಾಲಿನ್ ಅವರನ್ನು ಡಿಎಂಕೆ ಶಾಸಕಾಂಗದ ನಾಯಕರನ್ನು ಆಯ್ಕೆ ಮಾಡಲಾಗಿತ್ತು. ನಂತರ ಸದನದ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ