ಕಾಸರಗೋಡು: ಈಗ ಕಾಲ ಯಾವಪರಿ ಕೆಟ್ಟೋಗಿದೆ ಎಂದರೆ ಅಪ್ರಾಪ್ತ ಯುವಕನೊಬ್ಬ ಅಪ್ರಾಪ್ತ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದ. ಇದರ ವಿಚಾರಣೆ ವೇಳೆ ಆತನೇ 36ರ ಮಹಿಳೆಯಿಂದ ಲೈಂ*ಗಿಕ ಶೋಷಣೆಗೆ ಒಳಗಾಗಿದ್ದ ಎನ್ನುವ ವಿಚಾರ ಬಯಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
17 ವರ್ಷದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 36 ವರ್ಷದ ಮಹಿಳೆಯ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
25
ಪೊಕ್ಸೋ ಪ್ರಕರಣದ ವಿಚಾರಣೆ ವೇಳೆ ಮತ್ತೊಂದು ಪ್ರಕರಣ ಬಯಲಿಗೆ
ಈ ಪ್ರಕರಣದಲ್ಲಿ ಒಂದು ಅಚ್ಚರಿಯ ವಿಷಯವಿದೆ. ಬೇರೊಂದು ಪೋಕ್ಸೋ ಪ್ರಕರಣದಲ್ಲಿ 17 ವರ್ಷದ ಯುವಕನ ವಿಚಾರಣೆ ನಡೆಸುತ್ತಿದ್ದಾಗ, ಈ ಲೈಂಗಿಕ ದೌರ್ಜನ್ಯದ ವಿಷಯ ಪೊಲೀಸರಿಗೆ ತಿಳಿದುಬಂದಿದೆ.
35
17 ವರ್ಷದ ಯುವಕನಿಂದ 4 ವರ್ಷದ ಮಗುವಿನ ಮೇಲೆ ದೌರ್ಜನ್ಯ
ಅಂದಹಾಗೆ ಈ 17 ವರ್ಷದ ಯುವಕನೇ ನಾಲ್ಕು ವರ್ಷದ ಮಗುವಿನ ಮೇಲೆ ಲೈಂ*ಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಈತನ ವಿಚಾರಣೆ ವೇಳೆ ಬೆಚ್ಚಿ ಬೀಳಿಸುವ ಮಾಹಿತಿ ಹೊರಬಿದ್ದಿದೆ.
ಹೌದು, ಕಾಸರಗೋಡಿನ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಬಗ್ಗೆ ಹೇಳಿಕೆ ಪಡೆಯುತ್ತಿದ್ದಾಗ, 36 ವರ್ಷದ ಮಹಿಳೆ ತನ್ನ ಮೇಲೆ ದೌರ್ಜನ್ಯ ಎಸಗಿದ್ದನ್ನು ಆತ ಬಾಯ್ಬಿಟ್ಟಿದ್ದಾನೆ.
55
ವಿವರವಾದ ತನಿಖೆ ಆರಂಭಿಸಿದ ಪೊಲೀಸರು
ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಮಹಿಳೆಯ ವಿರುದ್ಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ನಂತರ ಅದನ್ನು ರಾಜಪುರಂ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಸದ್ಯ ರಾಜಪುರಂ ಪೊಲೀಸರು ಈ ಬಗ್ಗೆ ವಿವರವಾದ ತನಿಖೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ