Sonam Wangchuk shifted to Safdarjung Hospital ಜಂತರ್ ಮಂತರ್‌ನಲ್ಲಿ ಕಳೆದ ಹತ್ತೊಬ್ಬಂತು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸಿದ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಅರವಿಂದ್ ಕೇಜ್ರಿವಾಲ್, ಸಂಸದ ಚಂದ್ರಶೇಖರ್ ಅಜಾದ್ ಆಕ್ರೋಶ.
ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ ಹೈಕೋರ್ಟ್ ಆದೇಶ ಮತ್ತು ವೈದ್ಯಕೀಯ ತಜ್ಞರ ಸಲಹೆಯಂತೆ ಪೊಲೀಸರು ವಾಂಗ್‌ಚುಕ್ ಅವರನ್ನು ಜಂತರ್ ಮಂತರ್‌ನಿಂದ ಸ್ಥಳಾಂತರಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ದೆಹಲಿಯ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಟ್ವಿಟರ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, 'ಇಷ್ಟೊಂದು ದುರಹಂಕಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
24
ಮೋದಿ ಸರ್ಕಾರ ಸೋನಮ್ ವಾಂಗ್ಚುಕ್ ಜೊತೆ ಮಾತನಾಡಬೇಕಿತ್ತು
ಮೋದಿ ಸರ್ಕಾರ ಸೋನಮ್ ಜೊತೆ ಮಾತನಾಡಬೇಕಿತ್ತು:
ವಾಂಗ್ಚುಕ್ ಅವರನ್ನು ಬಲವಂತವಾಗಿ ತೆಗೆದುಹಾಕುವ ಬದಲು, ಮೋದಿ ಸರ್ಕಾರ ಸೋನಮ್ ವಾಂಗ್ಚುಕ್ ಅವರೊಂದಿಗೆ ಮಾತನಾಡಬೇಕಿತ್ತು. ಜಿರಳೆ ಚಳುವಳಿ ಹತ್ತಿಕ್ಕುವ ಬದಲು, ದೇಶದ ಶಿಕ್ಷಣ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವ ಭರವಸೆ ನೀಡಬೇಕಿತ್ತು. ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ಸ್ಥಳಾಂತಿರಿಸಿರುವುದು ಮೋದಿ ಸರ್ಕಾರದ ಸೋಲು ಎಂದು ಎಂದು ಟೀಕಿಸಿದ್ದಾರೆ.
34
ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತೊಮ್ಮೆ ತಲೀತಗ್ಗಿಸಿದೆ:
ಜಂತರ್ ಮಂತರ್‌ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಸ್ಥಳಾಂತರಿಸಿದ ವಿಚಾರವಾಗಿ ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ. ಕಳೆದ 21 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಉಟ್ಟ ಬಟ್ಟೆಯಲ್ಲೇ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟೇ ಅಲ್ಲದೆ ಅವರ ಸಹಚರರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ 'ಒಂದು ಶ್ರೇಣಿ, ಒಂದು ಪಿಂಚಣಿ' ಎಂದು ಒತ್ತಾಯಿಸಿ ತಿಂಗಳುಗಟ್ಟಲೆ ಮುಷ್ಕರ ನಡೆಸುತ್ತಿದ್ದ ಮಾಜಿ ಸೈನಿಕರಿಗೂ ಇದೇ ರೀತಿ ಆಯಿತು. ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗಲೂ ಬಲವಂತವಾಗಿ ಹತ್ತಿಕ್ಕಲಾಯಿತು. ಈಗ ಸೋನಮ್ ವಾಂಗ್‌ಚುಕ್ ಜಿ ಅವರ ಸತ್ಯಾಗ್ರಹಕ್ಕೂ ಅದೇ ರೀತಿ ಮಾಡಲಾಗುತ್ತಿದೆ. ಶಾಂತಿಯುತ ಪ್ರತಿಭಟನೆಯ ಹಕ್ಕು ಅಧಿಕಾರದ ಅನುಕೂಲಕ್ಕೆ ಮಾತ್ರ ಸೀಮಿತವಾಗಿದೆಯೇ? ಸೋನಮ್ ವಾಂಗ್‌ಚುಕ್ ಅವರಿಗೆ ಉತ್ತಮ ಆರೋಗ್ಯ, ಶಕ್ತಿ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾವು ಪ್ರಕೃತಿಯಲ್ಲಿ ಪ್ರಾರ್ಥಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ