ಹಣ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸ್ವಪಕ್ಷೀಯ ಕಾರ್ಯಕರ್ತರೇ ದಾಳಿ ನಡೆಸಿದ್ದಾರೆ. ಈ ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ, ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿದೆ.
ತಮಿಳುನಾಡಿನ ಬಿಜೆಪಿ ನಾಯಕ ಸೆಲ್ವಮಣಿ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ದಾಳಿ ನಡೆಸಿರೋದು ಸಹ ಬಿಜೆಪಿ ಕಾರ್ಯಕರ್ತರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ನಡೆಸಿದ ಕಾರ್ಯಕರ್ತರ ಹೇಳಿಕೆಯನ್ನಾಧರಿಸಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಮರನಾಥ್ ಯೋಗೀಶ್ವರನ್ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ತೆಗೆದುಹಾಕಲಾಗಿದೆ.
25
ಏನಿದು ಪ್ರಕರಣ?
ಓಂಶಕ್ತಿ ಸೆಲ್ವಮಣಿ (50) ಎಂಬವರು ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರ್ ಬಳಿಯ ವರದರಾಜಪುರಂ ನಿವಾಸಿಯಾಗಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಸೆಲ್ವಮಣಿ ಶ್ರೀಪೆರಂಬದೂರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಆರು ಜನರ ಗುಂಪು ಸೆಲ್ವಮಣಿ ಮೇಲೆ ಹಲ್ಲೆಗೆ ಯತ್ನಿಸಲಾಗಿತ್ತು.
35
ಕಾರ್ ಗಾಜು, ಸಿಸಿಟಿವಿ ಕ್ಯಾಮೆರಾ ಪುಡಿ ಪುಡಿ
ತಮ್ಮ ಮೇಲೆ ದಾಳಿಗೆ ಗುಂಪು ಬರುತ್ತಿದ್ದಂತೆ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆರು ಜನರ ಗುಂಪು ಕೋಪಗೊಂಡು ಮನೆಯ ಮುಂಭಾಗ ನಿಲ್ಲಿಸಿದ್ದ ಕಾರ್ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿ, ಕೊ*ಲೆ ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದಾರೆ. ಈ ಘಟನೆ ಸಂಬಂಧ ಸೆಲ್ವಮಣಿ ಮಣಿಮಂಗಲಂ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರನ್ನು ಬಂಧಿಸಿದ್ದಾ
ಬೂತ್ ಏಜೆಂಟರಿಗೆ ಬಿಜೆಪಿ ಹೈಕಮಾಂಡ್ ನೀಡಿದ್ದ ಹಣ ಹಂಚಿಕೆ ವಿಚಾರದಲ್ಲಿ ಜಗಳವಾಗಿತ್ತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅಮರನಾಥ್ ಹೇಳಿದ್ದರಿಂದ ಆರು ಜನರು ಸೆಲ್ವಮಣಿ ಮೇಲೆ ಹಲ್ಲೆಗೆ ಮುಂದಾಗಿತ್ತು ಎಂದು ವರದಿಯಾಗಿದೆ. ಈ ವಿಷಯ ತಿಳಿಯುತ್ತಿದ್ದ ಯುವ ಮೋರ್ಚಾ ರಾಜ್ಯಾಧ್ಯಕ್ಷ ಅಮರನಾಥ್ ಯೋಗೀಶ್ವರನ್ ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಜೆಪಿ ತೆಗೆದು ಹಾಕಿದೆ.
ಈ ಸಂಬಂಧ ತಮಿಳುನಾಡು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಎಸ್.ಜಿ. ಸೂರ್ಯ ಹೊರಡಿಸಿದ ಪ್ರಕಟಣೆ ಹೊರಡಿಸಿದ್ದಾರೆ. ಪಕ್ಷದ ಶಿಸ್ತು ಉಲ್ಲಂಘನೆ ಮತ್ತು ಪಕ್ಷಕ್ಕೆ ಕಳಂಕ ತಂದಿದ್ದಕ್ಕಾಗಿ ಅಮರನಾಥ್ ಯೋಗೀಶ್ವರನ್ ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ತಕ್ಷಣವೇ ಬಿಡುಗಡೆ ಮಾಡಲಾಗಿದೆ. ಕಾರ್ಯಕರ್ತರು ಅವರೊಂದಿಗೆ ಯಾವುದೇ ಸಂಪರ್ಕ ಇಟ್ಟುಕೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ