ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ನಟ ವಿಜಯ್, ಮಹಿಳೆಯರಿಗೆ ಮಾಸಿಕ ಸಹಾಯಧನ ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳಂತಹ ಭರವಸೆಗಳನ್ನು ಘೋಷಿಸಿದ್ದಾರೆ. ಇದೇ ಸಮಯದಲ್ಲಿ, ಪತ್ನಿ ಸಂಗೀತಾ ಅವರು ವಿವಾಹೇತರ ಸಂಬಂಧದ ಆರೋಪದ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಟಿವಿಕೆ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರು. ಸಹಾಯಧನ, ವಿವಾಹವಾಗಲಿರುವ ಯುವತಿಯರಿಗೆ ಚಿನ್ನದ ನಾಣ್ಯ ಮತ್ತು ರೇಷ್ಮೆ ಸೀರೆ ಉಡುಗೊರೆ, ಎಲ್ಲ ಕುಟುಂಬಗಳಿಗೆ 6 ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ನಟ ವಿಜಯ್ ಶನಿವಾರ ಘೋಷಿಸಿದ್ದಾರೆ.
25
ಕಾಮರಾಜರ್ ಕಲ್ವಿ ಉರುತಿ ತಿಟ್ಟಂ
ಮಾಸಿಕ ಸಹಾಯಧನ ಸರ್ಕಾರಿ ಉದ್ಯೋಗಿಗಳನ್ನು ಹೊರತುಪಡಿಸಿ, 60 ವರ್ಷ ಒಳಗಿನ ಎಲ್ಲ ಮಹಿಳೆಯರಿಗೆ ಅನ್ವಯವಾಗಲಿದೆ. ‘ಅನ್ನಪೂರ್ಣಿ ಸೂಪರ್ ಸಿಕ್ಸ್’ ಯೋಜನೆ ಅಡಿಯಲ್ಲಿ 6 ಉಚಿತ ಎಲ್‌ಪಿಜಿ ಸಿಲಿಂಡರ್ ಒದಗಿಸಲಾಗುವುದು. ವಿದ್ಯಾರ್ಥಿಗಳು ಶಾಲೆ ತೊರೆಯದಂತೆ ಮಾಡಲು, ಪ್ರತಿ ತಾಯಿ ಅಥವಾ ಪೋಷಕರಿಗೆ ‘ಕಾಮರಾಜರ್ ಕಲ್ವಿ ಉರುತಿ ತಿಟ್ಟಂ’ ಯೋಜನೆ ಅಡಿಯಲ್ಲಿ ವಾರ್ಷಿಕ 15,000 ರು.ಗಳ ಧನಸಹಾಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
35
ವಿವಾಹೇತರ ಸಂಬಂಧ
ನಟ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ವಿವಾಹೇತರ ಸಂಬಂಧ ಇರುವುದಾಗಿ ಆರೋಪಿಸಿ ಪತ್ನಿ ಸಂಗೀತಾ ವಿಚ್ಛೇದನ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ (51) ಹಾಗೂ ಸಂಗೀತಾ ಸೋರ್ನಲಿಂಗಂ (48) 1999ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 27 ವರ್ಷಗಳ ದಾಂಪತ್ಯೆಕ್ಕೆ ಅಂತ್ಯ ಹಾಡಲು ಮುಂದಾಗಿರುವ ಸಂಗೀತಾ, ‘ವಿಜಯ್‌ಗೆ ನಟಿಯೊಬ್ಬರ ಜೊತೆ ವಿವಾಹೇತರ ಸಂಬಂಧವಿದೆ. ಇದು ನನಗೆ 2021ರಲ್ಲಿ ಗೊತ್ತಾಯಿತು. ಸಂಬಂಧವನ್ನು ಕೊನೆಗೊಳಿಸುವುದಾಗಿ ವಿಜಯ್ ಭರವಸೆ ನೀಡಿದರೂ, ಅದು ಯಾವುದೇ ಪಶ್ಚಾತ್ತಾಪವಿಲ್ಲದೆ ಮುಂದುವರೆದಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾ
ಶನಿವಾರ ಮತ್ತೊಂದು ಅರ್ಜಿ ಸಲ್ಲಿಸಿದ್ದ ಸಂಗೀತಾ, ಚೆನ್ನೈನಲ್ಲಿರುವ ಮನೆಯನ್ನ ವಾಸಿಸಲು ನಮಗೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಚೆನ್ನೈನ ನಿವಾಸದಲ್ಲಿರಲು ವಿಜಯ್ ಬಿಡುತ್ತಿಲ್ಲ ಎಂದು ಸಂಗೀತಾ ಆರೋಪಿಸಿದ್ದಾರೆ. ಮತ್ತೊಂದೆಡೆ ನ್ಯಾಯಾಲಯದ ಹೊರಗೆ ಪ್ರಕರಣ ಇತ್ಯರ್ಥ ಮಾಡಿಕೊಳ್ಳಲು ವಿಜಯ್ ಮುಂದಾಗಿದ್ದು, ಇದಕ್ಕಾಗಿ 250 ಕೋಟಿ ರೂ ನೀಡಲು ಒಪ್ಪಿದ್ದಾರೆ ಎನ್ನಲಾಗಿದೆ.
ವಿಜಯ್, ಶುಕ್ರವಾರ ನಟಿ ತ್ರಿಶಾ ಕೃಷ್ಣನ್ ಅವರೊಂದಿಗೆ ಒಂದೇ ಕಾರಿನಲ್ಲಿ ಬಂದಿಳಿದು, ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ವಿಜಯ್‌ರ ಪತ್ನಿ ಸಂಗೀತ ಇತ್ತೀಚೆಗಷ್ಟೇ, ತಮ್ಮ ಪತಿ ಇನ್ನೊಬ್ಬಾಕೆಯೊಂದಿಗೆ ಸಂಬಂಧ ಹೊಂದಿದ್ದಾರೆಂದು ದೂರಿ, ವಿಚ್ಛೇದನಕ್ಕೆ ಕೋರಿ ಕೋರ್ಟ್‌ಗೆ ಹೋಗಿದ್ದರು. ಇದರ ಬೆನ್ನಲ್ಲೇ ವಿಜಯ್ ಮತ್ತು ತ್ರಿಶಾ ಮ್ಯಾಚಿಂಗ್ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ