ನಟ ಜೊಸೆಫ್ ವಿಜಯ್ ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ವಿಜಯ್ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಟ ಜೊಸೆಫ್ ವಿಜಯ್ ತಮಿಳುನಾಡಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. 2 ವರ್ಷಗಳ ಹಿಂದೆ ಪಕ್ಷ ಸ್ಥಾಪಿಸಿ ಅತ್ಯಲ್ಪ ಅವಧಿಯಲ್ಲಿ ಅಧಿಕಾರಕ್ಕೇರಿದ ಜೊಸೆಫ್ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಯಲಿ ಕುಳಿತು ಕೆಲ ಆದೇಶ ಹೊರಡಿಸಿದ ಬೆನ್ನಲ್ಲೇ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
25
ಮಹತ್ವದ ಆರ್ಡರ್ ಬೆನ್ನಲ್ಲೇ ವಿಜಯ್ ನಿರ್ಧಾರ
ನಟ ಜೊಸೆಫ್ ವಿಜಯ್ ತಮಿಳುನಾಡು ಮುಖ್ಯಮಂತ್ರಿ ಕಚೇರಿಗೆ ಆಗಮಿಸಿದ ಬಳಿಕ ಮಹಿಳಾ ಸುರಕ್ಷತೆ, ಉಚಿತ ವಿದ್ಯುತ್ ಸೇರಿದಂತೆ ಕೆಲ ಪ್ರಮುಖ ಭರವಸೆಗಳ ಕುರಿತು ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ ವಿಜಯ್ ತಾವು ಗೆದ್ದ ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.
35
ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ನಟ ವಿಜಯ್
ಟಿವಿಕೆ ಪಕ್ಷದ ಬಿರುಸಿನ ಪ್ರಚಾರ ಮಾಡಿದ ವಿಜಯ್ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದರು.ತಿರುಚ್ಚಿ ಪೂರ್ವ ಹಾಗೂ ಪೆರಂಬೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರದಿಂದ ವಿಜಯ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೀಗ ಪೆರಂಬೂರು ಶಾಸಕ ಸ್ಥಾನ ಉಳಿಸಿಕೊಂಡು, ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಯ್ ರಾಜೀನಾಮೆ ನೀಡಿ ತಿರುಚ್ಚಿ ಪೂರ್ವ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಯಲಿದೆ. ಈ ವೇಳೆ ನಟಿ ತ್ರಿಶಾ ಕೃಷ್ಣನ್ ಇಲ್ಲಿ ಸ್ಪರ್ಧಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಮಾಹಿತಿಗಳಿಗೆ ಯಾವುದೇ ಸ್ಪಷ್ಟತೆ ಇಲ್ಲ. ಹಲವು ಊಹಾಪೋಹಗಳು ಹರಿದಾಡುತ್ತಿದೆ.
55
ವಿಜಯ್ ಪ್ರಮಾಣವಚನ ವೈರಲ್
ನಟ ಜೊಸೆಫ್ ವಿಜಯ್ ಪ್ರಮಾಣವಚನದ ವಿಡಿಯೋಗಳು ಭಾರಿ ವೈರಲ್ ಆಗುತ್ತಿದೆ. ಸಿನಿಮಾ ಶೈಲಿಯಲ್ಲಿ ನಟ ವಿಜಯ್ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ್ದಾರೆ.ತಮಿಳುನಾಡಿನಲ್ಲಿ ಹೊಸ ಅಧ್ಯಾಯ ಹೊಸ ಯುಗ ಆರಂಭವಾಗಿದೆ ಎಂದಿದ್ದಾರೆ. ಇದು ಜನಸಾಮಾನ್ಯರ ಸರ್ಕಾರ ಎಂದಿದ್ದಾರೆ.
ವಿಜಯ್ ಪ್ರಮಾಣವಚನ ವೈರಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ