ಚುನಾವಣೆ ಘೋಷಣೆಗೂ ಕೆಲ ನಿಮಿಷಕ್ಕೂ ಮುನ್ನ ಮಮತಾ ಬಂಪರ್‌ ಘೋಷಣೆ; ದೀದಿ ಕೊನೇ ಕ್ಷಣದ ಆಟ?

Published : Mar 16, 2026, 09:14 AM IST

ಚುನಾವಣಾ ಆಯೋಗವು ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಸಂಹಿತೆ ಜಾರಿಗೆ ಕೆಲವೇ ನಿಮಿಷಗಳ ಮುನ್ನ ಮಾಡಿದ ಘೋಷಣೆಗಳು ವಿವಾದಕ್ಕೆ ಕಾರಣವಾಗಿವೆ. 

PREV
15
ಪಂಚ ರಾಜ್ಯಗಳ ಚುನಾವಣೆ

ಕೋಲ್ಕತಾ: ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಗೂ ಕೆಲವೇ ನಿಮಿಷಗಳ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಲವು ಘೋಷಣೆ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

25
ಬಂಪರ್ ಘೋಷಣೆ

ಚುನಾವಣಾ ಆಯೋಗವು ಭಾನುವಾರ ಸಂಜೆ 4 ಗಂಟೆಗೆ ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಿಸಿತ್ತು. ಅದಕ್ಕೂ ಕೆಲವೇ ನಿಮಿಷಗಳ ಮುಂಚೆ ಎಕ್ಸ್‌ನಲ್ಲಿ ದೀದಿ, ಪುರೋಹಿತರು, ಅಜಾನ್‌ ಕೂಗುವವರ ಗೌರವಧನ 1500 ರು.ನಿಂದ 2000 ರು.ಗೆ ಹೆಚ್ಚಳ, ಸರ್ಕಾರಿ ನೌಕರರಿಗೆ ಬಾಕಿ ಇರುವ ಪಿಂಚಣಿ ತುಟ್ಟಿ ಭತ್ಯೆಯನ್ನು ಪಾವತಿ ಮಾಡುವ ಘೋಷಣೆ ಮಾಡಿದ್ದಾರೆ. ಇದು ಚುನಾವಣೆಯ ಗಿಮಿಕ್‌ ಎಂದು ಬಿಜೆಪಿ ಆರೋಪಿಸಿದೆ.

35
ಆಯೋಗ ಸ್ಪಷ್ಟನೆ

ವಿವಾದದ ಕುರಿತು ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ‘ಚುನಾವಣೆ ಮಾದರಿ ನೀತಿ ಸಂಹಿತೆ ಬಳಿಕ ಘೋಷಣೆಯಾದರೆ ಅದು ನಿಯಮಗಳ ಉಲ್ಲಂಘನೆ. ಆದರೆ ಅದಕ್ಕೂ ಮುನ್ನ ರಾಜ್ಯ ಸರ್ಕಾರ ಘೋಷಣೆ ಮಾಡಿದರೆ ಅದು ನಿಯಮಗಳ ಉಲ್ಲಂಘನೆ ಅಲ್ಲ’ ಎಂದಿದೆ.

45
ಎಲ್ಲಿ ಯಾವಾಗ ಚುನಾವಣೆ

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಏ.9ಕ್ಕೆ, ತಮಿಳುನಾಡಲ್ಲಿ ಏ.23ಕ್ಕೆ ಮತ್ತು ಪಶ್ಚಿಮ ಬಂಗಾಳದಲ್ಲಿ ಏ.23 ಮತ್ತು 29ರಂದು ಮತದಾನ ನಡೆಯಲಿದೆ. 5 ರಾಜ್ಯಗಳ ಒಟ್ಟು 824 ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದ್ದು 17.4 ಕೋಟಿ ಜನರು ಮತದಾನದ ಅರ್ಹತೆ ಪಡೆದಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ಮಂಡ್ಯ ಜಿಲ್ಲೆಗೆ ಕೈಗಾರಿಕೆಯಲ್ಲಿ ಶಾಶ್ವತ ಕೊಡುಗೆ ನೀಡುವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

55
ಕರ್ನಾಟಕದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ

ಶಾಮನೂರು ಶಿವಶಂಕರಪ್ಪ ಮತ್ತು ಹೆಚ್‌.ವೈ.ಮೇಟಿ ನಿಧನಧ ಹಿನ್ನೆಲೆ ತೆರವಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ಎರಡೂ ಕ್ಷೇತ್ರಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆದ್ರೆ ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಅರ್ಹತೆ ಇಲ್ಲದೆ ಶಸ್ತ್ರ ಚಿಕಿತ್ಸೆ ವಂಚನೆಗೆ ಸಮ : ಹೈಕೋರ್ಟ್‌

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories