ಇವತ್ತು ಲೋಕಸಭೆಯಲ್ಲಿ Anti-Paper Leak Bill ಮಂಡನೆಯಾಗಿದೆ. ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನ ತಡೆಯಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಈ ತಿದ್ದುಪಡಿ ಮಸೂದೆಯಲ್ಲಿ ಏನಿದೆ? ಏನೆಲ್ಲ ಬದಲಾವಣೆ ಮಾಡಲಾಗಿದೆ ಅನ್ನೋ ವಿವರ ಇಲ್ಲಿದೆ.
ನವದೆಹಲಿ: ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ಮಟ್ಟಹಾಕಲು ಮತ್ತು ಪರೀಕ್ಷಾ ವ್ಯವಸ್ಥೆಯ ಮೇಲೆ ನಂಬಿಕೆ ಮರುಸ್ಥಾಪಿಸಲು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಹತ್ವದ Anti-Paper Leak Bill ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಮಸೂದೆಯನ್ನು ಮಂಡಿಸಿದ್ದು, ಪೇಪರ್ ಲೀಕ್ ಮಾಡುವ ಕಿರಾತಕರಿಗೆ ನಡುಕ ಹುಟ್ಟಿಸುವಂತಹ ಶಿಕ್ಷೆಗಳನ್ನು ಇದರಲ್ಲಿ ಪ್ರಸ್ತಾಪಿಸಲಾಗಿದೆ.
27
1) ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ಮತ್ತು ಭಾರೀ ದಂಡ
ಈಗಿರುವ ಕಾನೂನಿನ ಪ್ರಕಾರ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ 3 ರಿಂದ 5 ವರ್ಷ ಜೈಲು ಶಿಕ್ಷೆ ಇತ್ತು. ಆದರೆ ಹೊಸ ತಿದ್ದುಪಡಿ ಅನ್ವಯ, ಕನಿಷ್ಠ 5 ವರ್ಷದಿಂದ ಗರಿಷ್ಠ 10 ವರ್ಷದವರೆಗೆ ಏರಿಕೆ ಮಾಡಲಾಗಿದೆ. ಹಾಗೆಯೇ ಈ ಹಿಂದೆ ಇದ್ದ 10 ಲಕ್ಷ ರೂಪಾಯಿ ದಂಡವನ್ನು ಈಗ ಐದು ಪಟ್ಟು ಹೆಚ್ಚಿಸಲಾಗಿದ್ದು, 50 ಲಕ್ಷ ರೂಪಾಯಿ ದಂಡ ವಿಧಿಸಲು ಪ್ರಸ್ತಾಪಿಸಲಾಗಿದೆ.
37
2) ಪರೀಕ್ಷಾ ಏಜೆನ್ಸಿಗಳಿಗೆ (Service Providers) ಬಿಸಿ
ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿರುವ ಖಾಸಗಿ ಕಂಪನಿಗಳು ಅಥವಾ ಏಜೆನ್ಸಿಗಳು ಅಕ್ರಮದಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆ ಆಗಲಿದೆ. ಈ ಹಿಂದೆ ಇದ್ದ 1 ಕೋಟಿ ರೂ. ದಂಡವನ್ನು 5 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಇಂತಹ ಕಂಪನಿಗಳನ್ನು ಸಾರ್ವಜನಿಕ ಪರೀಕ್ಷೆ ನಡೆಸದಂತೆ ನಿಷೇಧಿಸುವ ಅವಧಿಯನ್ನು 4 ವರ್ಷದಿಂದ 8 ವರ್ಷಕ್ಕೆ ಏರಿಸಲಾಗಿದೆ.
ಸಂಘಟಿತವಾಗಿ ನೆಟ್‌ವರ್ಕ್ ಮಾಡಿಕೊಂಡು ಪೇಪರ್ ಲೀಕ್ ಮಾಡುವ ಗ್ಯಾಂಗ್‌ಗಳಿಗೆ ಅತಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಕನಿಷ್ಠ 7 ವರ್ಷದಿಂದ ಜೀವಾವಧಿ ಶಿಕ್ಷೆಯವರೆಗೆ ಪ್ರಸ್ತಾಪವಿದೆ. ಅಂತಹ ಸಂಸ್ಥೆ ಅಥವಾ ವ್ಯಕ್ತಿಗಳಿಗೆ ಕನಿಷ್ಠ 10 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ.
57
4) ಸಮಯ ಮಿತಿಯ ತನಿಖೆ (Two-Month Deadline)
ಪೇಪರ್ ಲೀಕ್ ಕೇಸ್‌ಗಳು ವರ್ಷಗಟ್ಟಲೆ ಎಳೆಯಬಾರದು ಎಂಬ ಕಾರಣಕ್ಕೆ ಸಮಯ ನಿಗದಿ ಮಾಡಲಾಗಿದೆ. ಪೊಲೀಸ್ ಅಥವಾ ವಿಶೇಷ ತನಿಖಾ ದಳ (STF) ಪ್ರಕರಣದ ತನಿಖೆಯನ್ನು 2 ತಿಂಗಳೊಳಗೆ ಪೂರ್ಣಗೊಳಿಸಬೇಕು.ಅಗತ್ಯವಿದ್ದರೆ ಈ ಪ್ರಕರಣಗಳನ್ನು ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ (CBI) ವರ್ಗಾಯಿಸಲು ಕೇಂದ್ರಕ್ಕೆ ಅಧಿಕಾರ ನೀಡಲಾಗಿದೆ.
67
5) ಫಾಸ್ಟ್ ಟ್ರ್ಯಾಕ್ ಕೋರ್ಟ್ ಮತ್ತು ತ್ವರಿತ ತೀರ್ಪು
ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಕೇಸ್‌ಗಳ ವಿಚಾರಣೆಗಾಗಿ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲಾಗುವುದು. ದೋಷಾರೋಪ ಪಟ್ಟಿ (Chargesheet) ಸಲ್ಲಿಕೆಯಾದ 3 ತಿಂಗಳೊಳಗೆ ವಿಚಾರಣೆ ಮುಗಿಸಿ ತೀರ್ಪು ನೀಡಬೇಕೆಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಮೇಲ್ಮನವಿ ಸಲ್ಲಿಸಬೇಕಾದರೂ ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠದ ಮುಂದೆ ಹೋಗಬೇಕು ಮತ್ತು ಅಲ್ಲಿಯೂ 3 ತಿಂಗಳೊಳಗೆ ವಿಲೇವಾರಿ ಮಾಡಬೇಕು.
77
6) ಉನ್ನತ ಅಧಿಕಾರಿಗಳ ಮೇಲೂ ಕ್ರಮ
ಕಂಪನಿಗಳು ಅಥವಾ ಸಂಸ್ಥೆಗಳು ಅಕ್ರಮದಲ್ಲಿ ಭಾಗಿಯಾದಾಗ, ಆ ಸಂಸ್ಥೆಯ ನಿರ್ದೇಶಕರು ಅಥವಾ ಹಿರಿಯ ಮ್ಯಾನೇಜ್‌ಮೆಂಟ್‌ಗೆ ಅಕ್ರಮದ ಬಗ್ಗೆ ತಿಳಿದಿದ್ದರೆ ಅಥವಾ ಅವರೂ ಶಾಮೀಲಾಗಿದ್ದರೆ, ಅವರಿಗೂ ಕನಿಷ್ಠ 5 ವರ್ಷ ಜೈಲು ಮತ್ತು 5 ಕೋಟಿ ರೂ. ದಂಡ ವಿಧಿಸಲಾಗುತ್ತದೆ.
ಬಿಲ್ ಮಂಡನೆಯಾಗುತ್ತಿದ್ದಂತೆ, ಜುಲೈ 20 ರಂದು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ವಿರೋಧ ಪಕ್ಷಗಳು ಭಾರಿ ಗದ್ದಲ ಸೃಷ್ಟಿಸಿದವು. ಈ ಗದ್ದಲದ ನಡುವೆಯೇ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಒಟ್ಟಾರೆಯಾಗಿ ನೀಟ್ ಮತ್ತು ನೆಟ್ (NET) ಪರೀಕ್ಷೆಗಳ ವಿವಾದದಿಂದ ಮುಖಭಂಗ ಅನುಭವಿಸಿದ್ದ ಕೇಂದ್ರ ಸರ್ಕಾರ, ಈಗ ಕಠಿಣ ಕಾನೂನಿನ ಮೂಲಕ ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸಲು ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ