IPL ಇತಿಹಾಸದಲ್ಲಿ ಗರಿಷ್ಠ ರನ್ ಸಿಡಿಸಿದ ಟಾಪ್ 10 ಬ್ಯಾಟ್ಸ್‌ಮನ್‌ಗಳಿವರು
First Published | Aug 13, 2020, 2:07 PM ISTಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಭಾರತದಲ್ಲಿ ನಡೆಯಬೇಕಿದ್ದ ಈ ಬಾರಿಯ ಐಪಿಎಲ್ ಕೊರೋನಾ ಭೀತಿಯಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸ್ಥಳಾಂತರಗೊಂಡಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಹೊಡಿಬಡಿಯಾಟ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಐಪಿಎಲ್‌ನಲ್ಲಿ ಹೊಸಹೊಸ ದಾಖಲೆಗಳು ನಿರ್ಮಾಣವಾಗುತ್ತಲೇ ಇರುತ್ತವೆ. 13ನೇ ಆವೃತ್ತಿ ಐಪಿಎಲ್ ಟೂರ್ನಿಗೂ ಮುನ್ನ ಈ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಗರಿಷ್ಠ ರನ್ ಬಾರಿಸಿದ ಟಾಪ್ 10 ಆಟಗಾರರ ಪರಿಚಯವನ್ನು Suvarnanews.com ಮಾಡುತ್ತಿದೆ ನೋಡಿ.