ಸೆಪ್ಟೆಂಬರ್ 19ರಿಂದ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯಲಿದ್ದು, ಆ.22ರಂದು ಚೆನ್ನೈ ಸೂಪರ್ ಕಿಂಗ್ಸ್ ಯುಎಇಗೆ ಹೊರಡಲಿದೆ ಎನ್ನಲಾಗಿದೆ. ತಂಡದ ನಾಯಕ ಎಂ.ಎಸ್.ಧೋನಿ, ಇಲ್ಲಿನ ಜಾರ್ಖಂಡ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ. ಧೋನಿಗಾಗಿ ಕ್ರೀಡಾಂಗಣದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಧೋನಿ ಬ್ಯಾಟಿಂಗ್‌ಗೆ ನೆರವಾಗಲು ಒಬ್ಬ ಸಹಾಯಕನಿಗೆ ಮಾತ್ರ ಕ್ರೀಡಾಂಗಣಕ್ಕೆ ಪ್ರವೇಶ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.