ತಮ್ಮ ದೇಶದ ಪರ ಆಡಲು ಸೂರ್ಯಕುಮಾರ್‌ ಯಾದವ್‌ಗೆ ಆಹ್ವಾನ ಕೊಟ್ಟ ಕಿವೀಸ್ ಮಾಜಿ ಆಟಗಾರ

First Published Oct 29, 2020, 4:11 PM IST

ದುಬೈ: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಬಹುತೇಕ ತನ್ನ ಪ್ಲೇ ಆಫ್ ಸ್ಥಾನವನ್ನು ರೋಹಿತ್ ಶರ್ಮಾ ಪಡೆ ಖಚಿತ ಪಡಿಸಿಕೊಂಡಿದೆ.
ಬಲಿಷ್ಠ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ಸೂರ್ಯಕುಮಾರ್ ಯಾದವ್ ಅಜೇಯ ಬ್ಯಾಟಿಂಗ್ ನೆರವಿನಿಂದ ಮುಂಬೈ ಭರ್ಜರಿ ಗೆಲುವು ದಾಖಲಿದೆ. ಕಳೆದ ಕೆಲವು ವರ್ಷಗಳಿಂದ ಅದ್ಭುತ ಫಾರ್ಮ್‌ನಲ್ಲಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಟೀಂ ಇಂಡಿಯಾ ಪರ ಆಡುವ ಅವಕಾಶ ಸಿಕ್ಕಿಲ್ಲ. ಇದರ ಬೆನ್ನಲ್ಲೇ ನ್ಯೂಜಿಲೆಂಡ್ ಮಾಜಿ ಸ್ಟಾರ್ ಆಟಗಾರ ತಮ್ಮ ದೇಶದ ಪರ ಆಡಲು ಮುಕ್ತ ಆಹ್ವಾನ ನೀಡಿದ್ದಾರೆ.

ಐಪಿಎಲ್‌ನಲ್ಲಿ ಕಳೆದ ಮೂರು ಆವೃತ್ತಿಗಳಿಂದಲೂ ಸ್ಥಿರ ಪ್ರದರ್ಶನ ತೋರುತ್ತಾ ಬಂದಿರುವ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್‌ಗೆ ಟೀಂ ಇಂಡಿಯಾವನ್ನು ಪ್ರತಿನಿಧಿಸುವ ಅವಕಾಶ ಒದಗಿ ಬಂದಿಲ್ಲ.
undefined
ಭಾರತದ ಮಿಸ್ಟರ್ 360 ಎಂದೇ ಕರೆಸಿಕೊಳ್ಳುವ ಸೂರ್ಯಕುಮಾರ್ ಯಾದವ್ ಸ್ಪಿನ್ ಇರಲಿ ಅಥವಾ ವೇಗದ ಬೌಲಿಂಗೇ ಇರಲಿ ಲೀಲಾಜಾಲವಾಗಿ ರನ್ ಕಲೆಹಾಕುವ ಸಾಮರ್ಥ್ಯ ಹೊಂದಿದ್ದಾರೆ.
undefined
13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲೂ ಉತ್ತಮವಾಗಿ ಆಡುತ್ತಿರುವ ಸೂರ್ಯನಿಗೆ ಈ ಬಾರಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು.
undefined
ಆದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಾಗ ಮತ್ತೆ ಸೂರ್ಯ ಕುಮಾರ್ ಯಾದವ್ ಹೆಸರು ನಾಪತ್ತೆಯಾಗಿತ್ತು.
undefined
ಇದರ ಬೆನ್ನಲ್ಲೇ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 43 ಎಸೆತಗಳಲ್ಲಿ ಅಜೇಯ 79 ರನ್ ಚಚ್ಚುವ ಮೂಲಕ ಆಯ್ಕೆಗಾರರ ಮುಖಕ್ಕೆ ಮಂಗಳಾರತಿ ಎತ್ತಿದ್ದಾರೆ.
undefined
ಇಷ್ಟೆಲ್ಲಾ ಅದ್ಭುತ ಪ್ರದರ್ಶನ ತೋರುತ್ತಿದ್ದರೂ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇನ್ನೂ ಪಾದಾರ್ಪಣೆ ಮಾಡದಿರುವ ಬಗ್ಗೆ ನ್ಯೂಜಿಲೆಂಡ್ ಮಾಜಿ ಆಲ್ರೌಂಡರ್ ಸ್ಕಾಟ್ ಸ್ಟೈರೀಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
undefined
ಈ ಕುರಿತಂತೆ ಟ್ವೀಟ್ ಮಾಡಿರುವ ಸ್ಟೈರೀಸ್, ನಿಜಕ್ಕೂ ಅಚ್ಚರಿಯಾಗುತ್ತಿದೆ. ಒಂದು ವೇಳೆ ಸೂರ್ಯಕುಮಾರ್ ಯಾದವ್ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಬೇಕು ಎನ್ನುವ ಬಯಕೆಯಿದ್ದರೆ ವಿದೇಶದತ್ತ ಮುಖಮಾಡಬಹುದು ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ತಮ್ಮ ದೇಶಕ್ಕೆ ಆಹ್ವಾನ ನೀಡಿದ್ದಾರೆ.
undefined
ಮುಂಬೈ ಮೂಲದ ಸೂರ್ಯಕುಮಾರ್ ಯಾದವ್ 2018 ಹಾಗೂ 2019ನೇ ಆವೃತ್ತಿಯ ಐಪಿಎಲ್‌ನಲ್ಲಿ 400+ ರನ್ ಬಾರಿಸಿದ್ದಾರೆ. ಇನ್ನು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 12 ಪಂದ್ಯಗಳನ್ನಾಡಿ 362 ರನ್ ಬಾರಿಸಿದ್ದಾರೆ.
undefined
ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಬ್ಯಾಟಿಂಗ್ ಮಾಡುವ ಸಾಮರ್ಥ್ಯವಿರುವ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್‌ ಪ್ರದರ್ಶನಕ್ಕೆ ಆರ್‌ಸಿಬಿ ತಂಡದ ಮುಖ್ಯ ಕೋಚ್ ಸೈಮನ್ ಕ್ಯಾಟಿಚ್ ಸಹಾ ಮೆಚ್ಚುಗೆ ವ್ಯಕ್ತಪಡಿಸಿದ್ಧಾರೆ.
undefined
click me!