ಮುಂಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಕ್ತಾಯಕ್ಕೆ ಇನ್ನೊಂದೇ ಪಂದ್ಯ ಬಾಕಿ ಉಳಿದಿದೆ. ನವೆಂಬರ್ 10ರಂದು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
ಇದೀಗ ಫೈನಲ್ ಪಂದ್ಯಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಜಿ ಕೋಚ್ ಟಾಮ್ ಮೂಡಿ, 13ನೇ ಅವೃತ್ತಿಯ ತಮ್ಮ ನೆಚ್ಚಿನ ಬೆಸ್ಟ್ ಪ್ಲೇಯಿಂಗ್ XI ತಂಡವನ್ನು ಪ್ರಕಟಿಸಿದ್ದಾರೆ. ಈ ಪೈಕಿ ಮುಂಬೈ ಇಂಡಿಯನ್ಸ್ ತಂಡದಿಂದ 3, ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡದಿಂದ 2 ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದಿಂದ ತಲಾ ಒಬ್ಬೊಬ್ಬರನ್ನು ಆಯ್ಕೆ ಮಾಡಿದ್ದಾರೆ. ಐಪಿಎಲ್ ನಿಯಮದಂತೆ 7 ಭಾರತೀಯ ಆಟಗಾರರು ಹಾಗೂ 4 ವಿದೇಶಿ ಆಟಗಾರರು ಟಾಮ್ ಮೂಡಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.