CSK ಗೆ ಬಿಗ್‌ ಶಾಕ್: IPL 2020 ಸಂಪೂರ್ಣ ಟೂರ್ನಿಯಿಂದ ಸುರೇಶ್ ರೈನಾ ಔಟ್..!

First Published | Aug 29, 2020, 12:08 PM IST

ದುಬೈ: ನಿನ್ನೆಯಷ್ಟೇ ಕೊರೋನಾ ಸೋಂಕಿನಿಂದ ಬೆಚ್ಚಿ ಬಿದ್ದಿದ್ದ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅತ್ಯಂತ ನಂಬಿಕಸ್ಥ ಬ್ಯಾಟ್ಸ್‌ಮನ್ ಸುರೇಶ್ ರೈನಾ 13ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.
ಹೌದು, ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ದುಬೈನಿಂದ ತವರಿಗೆ ಮರಳಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಚೆನ್ನೈ ಸೂಪರ್ ಕಿಂಗ್ಸ್‌ನ ಫ್ರಾಂಚೈಸಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ವಿಚಾರವನ್ನು ಖಚಿತ ಪಡಿಸಿದೆ.
 

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ ಇದೀಗ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಅತ್ಯಂತ ನಂಬಿಕಸ್ಥ ಬ್ಯಾಟ್ಸ್‌ಮನ್ ಸುರೇಶ್ ರೈನಾ 13ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ.
ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ದುಬೈನಿಂದ ತವರಿಗೆ ಮರಳಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಚೆನ್ನೈ ಸೂಪರ್ ಕಿಂಗ್ಸ್‌ನ ಫ್ರಾಂಚೈಸಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ವಿಚಾರವನ್ನು ಖಚಿತ ಪಡಿಸಿದೆ.
Tap to resize

ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಭಾರತಕ್ಕೆ ಮರಳಿದ್ದು, ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್ ತಂಡವು ಇಂತಹ ಸಂದರ್ಭದಲ್ಲಿ ಸುರೇಶ್ ರೈನಾ ಹಾಗೂ ಅವರ ಕುಟುಂಬದ ಬೆಂಬಲಕ್ಕಿದೆ ಎಂದು ಸಿಇಒ ವಿಶ್ವನಾಥನ್ ಹೇಳಿದ್ದಾರೆ.
ಆಗಸ್ಟ್ 15ರಂದು ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಕೆಲವೇ ನಿಮಿಷಗಳಲ್ಲಿ 33 ವರ್ಷದ ಸುರೇಶ್ ರೈನಾ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್ ತಂಡವು ಆಗಸ್ಟ್ 21ರಂದು ದುಬೈಗೆ ಬಂದಿಳಿದಿತ್ತು.
ನಿನ್ನೆಯಷ್ಟೇ ಸಿಎಸ್‌ಕೆ ತಂಡದ ಕೆಲ ಆಟಗಾರರಿಗೆ ಹಾಗೂ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದರಿಂದ ಇಡೀ ತಂಡ ಇದೀಗ ಹೋಟೆಲ್‌ನಲ್ಲಿಯೇ ಕ್ವಾರಂಟೈನ್ ಆಗಿದೆ.
ಐಪಿಎಲ್ ಟೂರ್ನಿಯಲ್ಲಿ ಸುರೇಶ್ ರೈನಾ ಸಿಎಸ್‌ಕೆ ಪರ ಅಸಾಧಾರಾಣ ದಾಖಲೆಗಳನ್ನು ಹೊಂದಿದ್ದು, ಹಲವಾರು ಬಾರಿ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.
ಇನ್ನು ಇದುವರೆಗೂ ರೈನಾ 189 ಇನಿಂಗ್ಸ್‌ನಲ್ಲಿ 5368 ರನ್ ಸಿಡಿಸುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಸೆಪ್ಟೆಂಬರ್ 19ರಿಂದ ಆರಂಭವಾಗಿ ನವೆಂಬರ್ 10ರವರೆಗೆ ನಡೆಯಲಿದೆ

Latest Videos

click me!