ಅಬುಧಾಬಿ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾನುವಾರ ನಡೆಯಲಿರುವ ಸನ್‌ರೈಸರ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ ವಹಿಸಿದೆ.
ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಮುಗ್ಗರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶತಾಯಗತಾಯ ಹೈದರಾಬಾದ್ ಎದುರು ಗೆದ್ದು ಚೊಚ್ಚಲ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಲು ಎದುರು ನೋಡುತ್ತಿದೆ. ಹೀಗಾಗಿ ಹೈದರಾಬಾದ್ ಎದುರಿನ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 2 ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.