RCB ವಿರುದ್ಧ ಸೋಲಿನ ಬೆನ್ನಲ್ಲೇ ಕಾರ್ತಿಕ್ ತಲೆದಂಡ; ಕೆಕೆಆರ್ ತಂಡಕ್ಕೀಗ ಹೊಸ ನಾಯಕ ಆಯ್ಕೆ.!

First Published | Oct 16, 2020, 4:10 PM IST

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಭರ್ಜರಿಯಾಗಿಯೇ ನಡೆಯುತ್ತಿದ್ದು, ಈಗಾಗಲೇ ಅರ್ಧ ಆವೃತ್ತಿ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಿರುವಾಗಲೇ ಪ್ಲೇ ಆಫ್ ಪ್ರವೇಶಕ್ಕಾಗಿ ಎಲ್ಲಾ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.
ಇನ್ನು ಟೂರ್ನಿಯ ಮಧ್ಯದಲ್ಲಿಯೇ ಕೋಲ್ಕತ ನೈಟ್‌ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದಾರೆ. ಇದೀಗ ಕೆಕೆಆರ್ ತಂಡಕ್ಕೆ ಹೊಸ ನಾಯಕ ನೇಮಕವಾಗಿದ್ದಾರೆ.
 

ಕೋಲ್ಕತ ನೈಟ್ ರೈಡರ್ಸ್ ತಂಡದ ನಾಯಕ ಸ್ಥಾನದಿಂದ ದಿನೇಶ್ ಕಾರ್ತಿಕ್ ಕೆಳಗಿಳಿದಿದ್ದಾರೆ.
undefined
ಇದೀಗ ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕ ಇಯಾನ್ ಮಾರ್ಗನ್ ಕೆಕೆಆರ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.
undefined

Latest Videos


ಬ್ಯಾಟಿಂಗ್‌ನತ್ತ ಹೆಚ್ಚು ಗಮನ ಹರಿಸಿ ತಂಡಕ್ಕೆ ನೆರವಾಗುವ ಉದ್ದೇಶದಿಂದ ನಾಯಕತ್ವದಿಂದ ಕೆಳಗಿಳಿದಿರುವುದಾಗಿ ಕಾರ್ತಿಕ್ ತಿಳಿಸಿದ್ದಾರೆ.
undefined
ಕಳೆದೆರಡುವರೆ ವರ್ಷಗಳಿಂದ ಕೆಕೆಆರ್ ತಂಡದ ನಾಯಕರಾಗಿ ಯಶಸ್ವಿಯಾಗಿ ಮುನ್ನಡೆಸಿದ್ದಕ್ಕೆ ಫ್ರಾಂಚೈಸಿ ಧನ್ಯವಾದ ಅರ್ಪಿಸಿದ್ದಾರೆ.
undefined
ಇದೀಗ ಮುಂಬೈ ಇಂಡಿಯನ್ಸ್ ವಿರುದ್ಧ ಶುಕ್ರವಾರ(ಅ.16)ದಂದು ನಡೆಯಲಿರುವ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಇಯಾನ್ ಮಾರ್ಗನ್ ಮುನ್ನಡೆಸಲಿದ್ದಾರೆ.
undefined
ದಿನೇಶ್ ಕಾರ್ತಿಕ್ ನಿರ್ಧಾರ ಅಚ್ಚರಿ ಮೂಡಿಸಿದೆ, ಅದರೆ ಅವರ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಕೆಕೆಆರ್ ಸಿಇಒ ವೆಂಕಿ ಮೈಸೂರು ತಿಳಿಸಿದ್ದಾರೆ.
undefined
ಇನ್ನು ಇಂಗ್ಲೆಂಡ್‌ಗೆ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಇಯಾನ್ ಮಾರ್ಗನ್ ಕೆಕೆಆರ್ ತಂಡವನ್ನು ಮುನ್ನಡೆಸುತ್ತಿರುವುದು ನಮ್ಮ ಅದೃಷ್ಟವೆಂದು ವೆಂಕಿ ಹೇಳಿದ್ದಾರೆ.
undefined
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡ 7 ಪಂದ್ಯಗಳನ್ನಾಡಿದ್ದು, 4 ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
undefined
ಕೆಕೆಆರ್ ತಂಡ ಕಳೆದ 4 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಮುಗ್ಗರಿಸಿದ್ದು, ಇದೀಗ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.
undefined
ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರು ಶಾರ್ಜಾ ಮೈದಾನದಲ್ಲಿ ಆಘಾತಕಾರಿ ಸೋಲು ಕಂಡಿರುವುದು ಕೆಕೆಆರ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ.
undefined
ಇಯಾನ್ ಮಾರ್ಗನ್‌ಗೆ ನಾಯಕತ್ವ ನೀಡಿದ್ದು, ಕೆಕೆಆರ್ ಅದೃಷ್ಟ ಬದಲಾಯಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
undefined
click me!