Published : Sep 24, 2020, 01:00 PM ISTUpdated : Sep 24, 2020, 05:33 PM IST
ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ದೂರಿಯಾಗಿಯೇ ಶುಭಾರಂಭ ಮಾಡಿದೆ. ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ 10 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು.
ಇದೀಗ ಇಂದು ಕರ್ನಾಟಕದ ಆಟಗಾರರಿಂದಲೇ ಕೂಡಿರುವ ಕಿಂಗ್ಸ್ ಇಲೆವನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದು, ದುಬೈನ ಅಂತಾರಾಷ್ಟ್ರೀಯ ಮೈದಾನ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗುವ ಸಾಧ್ಯತೆ. ಇಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ.