ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಿತ್ತು. ಆದರೆ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ 97 ರನ್‌ಗಳ ಹೀನಾಯ ಸೋಲು ಕಂಡಿತ್ತು.
ಇದೀಗ ಇಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರ್‌ಸಿಬಿ ಕಣಕ್ಕಿಳಿಯಲಿದ್ದು, ತಂಡದಲ್ಲಿ ಎರಡು ಬದಲಾವಣೆಗಳನ್ನು ನಿರೀಕ್ಷೆ ಮಾಡಲಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ತಂಡದಲ್ಲಿ 3 ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ..