ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡದಲ್ಲಿ 1 ಬದಲಾವಣೆ?
First Published | Oct 28, 2020, 12:07 PM ISTಅಬುಧಾಬಿ(ಅ.28): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 48ನೇ ಪಂದ್ಯದಲ್ಲಿಂದು ಬಲಿಷ್ಠ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ ವಹಿಸಲಿದೆ.
ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ 8 ವಿಕೆಟ್‌ಗಳ ಆಘಾತಕಾರಿ ಸೋಲು ಕಂಡಿದ್ದ ವಿರಾಟ್ ಕೊಹ್ಲಿ ಪಡೆ, ಮುಂಬೈ ವಿರುದ್ಧದ ಗೆದ್ದು ಪ್ಲೇ ಆಫ್‌ಗೇರುವ ಲೆಕ್ಕಾಚಾರದಲ್ಲಿದೆ. ಮುಂಬೈ ವಿರುದ್ಧದ ಪಂದ್ಯಕ್ಕೆ ಆರ್‌ಸಿಬಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ. ಆರ್‌ಸಿಬಿ ಸಂಭಾವ್ಯ ತಂಡ ಹೀಗಿದೆ ನೋಡಿ.