ಬೆಂಗಳೂರು: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಿಲಾಡಿ ಬ್ಯಾಟಿಂಗ್ ಜೋಡಿ ಎಂದರೆ ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್. ಕಳೆದ ಹಲವಾರು ವರ್ಷಗಳಿಂದ ಬೆಂಗಳೂರು ತಂಡಕ್ಕೆ ಅವಿಸ್ಮರಣೀಯ ಗೆಲುವುಗಳನ್ನು ತಂದಿಟ್ಟಿದ್ದಾರೆ. ಇದೀಗ ಕೋಲ್ಕನ ನೈಟ್ ರೈಡರ್ಸ್ ವಿರುದ್ಧವೂ ಅಂತಹದ್ದೇ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ಈ ಜೋಡಿ ತೋರಿಸಿದೆ. ಇದರ ಜತೆಗೆ ಐಪಿಎಲ್ ಇತಿಹಾಸದಲ್ಲೇ ಅಪರೂಪದ ದಾಖಲೆಯೊಂದನ್ನು ಈ ಜೋಡಿ ನಿರ್ಮಿಸಿದೆ.