ಮುಂಬೈ ವಿರುದ್ಧದ ಪಂದ್ಯಕ್ಕೂ RCBಗೆ ಶಾಕ್; ಪ್ರಮುಖ ವೇಗಿ ಆಡೋದು ಡೌಟ್..!

First Published | Oct 27, 2020, 11:23 AM IST

ದುಬೈ: ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹೊಸ್ತಿಲಲ್ಲಿದ್ದು, ಬುಧವಾರ(ಅ.27) ನಡೆಯಲಿರುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ.
ಹೌದು, ಈ ಪಂದ್ಯ ಆರಂಭಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ತಂಡದ ಸ್ಟಾರ್ ವೇಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎನಿಸಿದೆ.

13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ.
ಸದ್ಯ 11 ಪಂದ್ಯಗಳನ್ನಾಡಿರುವ ಆರ್‌ಸಿಬಿ ತಂಡ 7ರಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
Tap to resize

ಇನ್ನುಳಿದ 3 ಪಂದ್ಯಗಳಲ್ಲಿ ಪ್ಲೇ ಆಫ್ ಪ್ರವೇಶಿಸಬೇಕಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕನಿಷ್ಠ ಒಂದು ಪಂದ್ಯವನ್ನಾದರೂ ಗೆಲ್ಲಬೇಕಾಗಿದೆ.
ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶೇಕ್‌ ಜಾಯೆದ್ ಮೈದಾನದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಇದೀಗ ಆರ್‌ಸಿಬಿ ತಂಡದ ಸ್ಟಾರ್ ವೇಗಿ ನವದೀಪ್ ಸೈನಿ ಗಾಯಕ್ಕೆ ತುತ್ತಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನವದೀಪ್ ಸೈನಿ ಬಲಗೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು.
ಸಿಎಸ್‌ಕೆ ವಿರುದ್ಧದ 18ನೇ ಓವರ್‌ ಬೌಲಿಂಗ್ ಮಾಡಿಗೆ ಚೆಂಡನ್ನು ಹಿಡಿಯುವಾಗ ಸೈನಿ ತಮ್ಮ ಬಲಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ 2016ರಲ್ಲಿ ಕೋಲ್ಕತ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಇದೇ ರೀತಿ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು.

Latest Videos

click me!