ಭಾರತದಲ್ಲಿ ಕೊರೋನಾ ವೈರಸ್ ಪತ್ತೆಯಾದ ಬೆನ್ನಲ್ಲೇ ಹಲವು ಕಾರ್ಯಕ್ರಮಗಳು ರದ್ದಾಗಿದೆ. ಶೂಟಿಂಗ್ ವಿಶ್ವಕಪ್ ಸೇರಿದಂತೆ ಕೆಲ ಕ್ರೀಡಾಕೂಟಗಳು ಮುಂದೂಡಲ್ಪಟ್ಟಿದೆ. ಇದೀಗ ಐಪಿಎಲ್ ಟೂರ್ನಿಗೂ ಬಿಸಿ ತಟ್ಟಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದಿದ್ದಾರೆ. ಆದರೆ ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ಆಯಾ ರಾಜ್ಯಗಳ ಆರೋಗ್ಯ ಇಲಾಖೆಯ ಸೂಚನೆಯಿಂದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿದೆ.