ಐಪಿಎಲ್ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮತ್ತೊಮ್ಮೆ ಕಪ್ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದು ಎನಿಸಿರುವ ಮುಂಬೈ 2020ರಲ್ಲೂ ಕಪ್ ತನ್ನಲ್ಲೇ ಉಳಿಸಿಕೊಳ್ಳಲು ಹೋರಾಡಲಿದೆ. ಮುಂಬೈ ತಂಡದ ಅತ್ಯಂತ ಯಶಸ್ವಿ ನಾಯಕ ರೋಹಿತ್ ಶರ್ಮಾ ಕೆಲ ಪಂದ್ಯಗಳ ಪಟ್ಟಿಗೆ ವಿಶ್ರಾಂತಿ ಪಡೆದರೆ ಅಥವಾ ಗಾಯಕ್ಕೆ ತುತ್ತಾದರೆ ಹಿಟ್‌ಮ್ಯಾನ್ ಅನುಪಸ್ಥಿತಿಯಲ್ಲಿ ಈ ನಾಲ್ವರು ಆಟಗಾರರು ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಬಹುದು. ಯಾರು ಆ ಆಟಗಾರರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.