ಐಪಿಎಲ್ 2020 ಆರಂಭಕ್ಕೂ ಮುನ್ನ ರಾಜಸ್ಥಾನ ರಾಯಲ್ಸ್ ಪಾಳಯದಲ್ಲಿ ಶುರುವಾಯ್ತು ಆತಂಕ..!

First Published Sep 16, 2020, 11:56 AM IST

ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಪಾಳಯದಲ್ಲಿ ಆತಂಕದ ಕಾರ್ಮೋಡ ಕವಿಯಲಾರಂಭಿಸಿದೆ.
ತಂಡದ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಲಭ್ಯತೆಯ ಬಗ್ಗೆ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ತಲೆಕೆಡಿಸಿಕೊಂಡಿದೆ. ಇದರ ನಡುವೆ ರಾಜಸ್ಥಾನ ರಾಯಲ್ಸ್ ತಂಡದ ಕೋಚ್, ಇಂಗ್ಲೆಂಡ್ ವಿಶ್ವಕಪ್ ಗೆಲುವಿನ ಹೀರೋ ಸ್ಟೋಕ್ಸ್ ಲಭ್ಯತೆಯ ಕುರಿತಂತೆ ತುಟಿಬಿಚ್ಚಿದ್ದಾರೆ. 
 

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ.
undefined
ಇನ್ನು ರಾಜಸ್ಥಾನ ರಾಯಲ್ಸ್ ತಂಡವು ಸೆಪ್ಟೆಂಬರ್ 22ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.
undefined
ಪ್ರಸಕ್ತ ಸಾಲಿನ ಐಪಿಎಲ್‌ ಟೂರ್ನಿಗೆ ನ್ಯೂಜಿಲೆಂಡ್‌ನ ಸ್ಟಾರ್‌ ಆಟಗಾರ ಬೆನ್‌ ಸ್ಟೋಕ್ಸ್‌ ಲಭ್ಯರಾಗುವುದು ಅನುಮಾನ ಎನ್ನಲಾಗುತ್ತಿದೆ.
undefined
ತಂಡದ ಆಡಳಿತ ಮಂಡಳಿಯಿಂದ ಬೆನ್ ಸ್ಟೋಕ್ಸ್ ಲಭ್ಯತೆಯ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ರಾಜಸ್ಥಾನ್‌ ರಾಯಲ್ಸ್‌ ತಂಡದ ಕೋಚ್‌ ಆ್ಯಂಡ್ರೂ ಮೆಕ್‌ಡೊನಾಲ್ಡ್‌ ಹೇಳಿದ್ದಾರೆ.
undefined
ಸ್ಟೋಕ್ಸ್‌ ಅವರ ತಂದೆ ಮಿದುಳು ಕ್ಯಾನ್ಸರ್‌ನಿಂದ ಬಳಲುತಿದ್ದು, ಈ ಸಂಕಷ್ಟದ ಸಮಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಅವರ ಜತೆ ನಿಲ್ಲಲಿದೆ.
undefined
ಅವರಿಗೆ ಎಷ್ಟು ಸಮಯ ಬೇಕೋ ಅಷ್ಟು ಸಮಯವನ್ನು ಅವರಿಗೆ ನೀಡಲು ತಾವು ಸಿದ್ದವಿರುವುದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡದ ಕೋಚ್‌ ಆ್ಯಂಡ್ರೂ ಮೆಕ್‌ಡೊನಾಲ್ಡ್‌ ತಿಳಿಸಿದ್ದಾರೆ.
undefined
ಬೆನ್ ಸ್ಟೋಕ್ಸ್ ಭರ್ಜರಿ ಫಾರ್ಮ್‌ನಲ್ಲಿದ್ದು, 2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
undefined
ಇದು ಬೆನ್ ಸ್ಟೋಕ್ಸ್ ಕಥೆಯಾದರೆ, ಮತ್ತೊಂದೆಡೆ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ ಲಭ್ಯತೆ ಬಗ್ಗೆಯೂ ರಾಜಸ್ಥಾನ ರಾಯಲ್ಸ್ ಆತಂಕಗೊಂಡಂತೆ ಕಂಡು ಬಂದಿದೆ.
undefined
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸೀಮಿತ ಓವರ್‌ಗಳ ಸರಣಿಯಲ್ಲಿ ಸ್ಟೀವ್ ಸ್ಮಿತ್ ಕೂಡಾ ಗಾಯಕ್ಕೆ ತುತ್ತಾಗಿದ್ದು, ಏಕದಿನ ಸರಣಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.
undefined
ಈ ಇಬ್ಬರು ಆಟಗಾರರು ಇಲ್ಲದೇ ಕಣಕ್ಕಿಳಿದರೆ ರಾಜಸ್ಥಾನ ರಾಯಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.
undefined
click me!